ADVERTISEMENT

ಗುಳೇದಗುಡ್ಡ ಪುರಸಭೆಯಲ್ಲಿ ಭ್ರಷ್ಟಾಚಾರ: ಮುಂದುವರಿದ ಸತ್ಯಾಗ್ರಹ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2025, 4:09 IST
Last Updated 5 ಡಿಸೆಂಬರ್ 2025, 4:09 IST
ಗುಳೇದಗುಡ್ಡ ಪುರಸಭೆಯಲ್ಲಿ ನಡೆದ ಭ್ರಷ್ಟಾಚಾರ ವಿಷಯವಾಗಿ ಸರದಿ ಸತ್ಯಾಗ್ರಹದಲ್ಲಿ ಬಿಜೆಪಿ ಮಾಜಿ ಶಾಸಕ ರಾಜಶೇಖರ ಶೀಲವಂತ ಮಾತನಾಡಿದರು
ಗುಳೇದಗುಡ್ಡ ಪುರಸಭೆಯಲ್ಲಿ ನಡೆದ ಭ್ರಷ್ಟಾಚಾರ ವಿಷಯವಾಗಿ ಸರದಿ ಸತ್ಯಾಗ್ರಹದಲ್ಲಿ ಬಿಜೆಪಿ ಮಾಜಿ ಶಾಸಕ ರಾಜಶೇಖರ ಶೀಲವಂತ ಮಾತನಾಡಿದರು   

ಪ್ರಜಾವಾಣಿ ವಾರ್ತೆ

ಗುಳೇದಗುಡ್ಡ: ಪಟ್ಟಣದ ಪುರಸಭೆಯಲ್ಲಿ ಸಿಬ್ಬಂದಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಕೈಗೊಂಡಿರುವ ಸರದಿ ಸತ್ಯಾಗ್ರಹ ಗುರುವಾರ 3ನೆಯ ದಿನಕ್ಕೆ ಮುಂದುವರಿದಿದೆ.

ಪಟ್ಟಣದ ಪುರಸಭೆ ಎದುರಿನ ಸಾರ್ವಜನಿಕ ಕಟ್ಟೆ ಮೇಲೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಮಾಜಿ ಶಾಸಕ ರಾಜಶೇಖರ ಶೀಲವಂತ ನೇತೃತ್ವದಲ್ಲಿ ಕೈಗೊಂಡ ಸರದಿ ಸತ್ಯಾಗ್ರಹಕ್ಕೆ ಬಿಜೆಪಿ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಬೆಂಬಲ ವ್ಯಕ್ತಪಡಿಸಿದರು.

ADVERTISEMENT

ಮಾಜಿ ಶಾಸಕ ರಾಜಶೇಖರ ಶೀಲವಂತ ಮಾತನಾಡಿ, ಪುರಸಭೆಯಲ್ಲಿ ಸಿಬ್ಬಂದಿ ತ್ವರಿತ ಕಾರ್ಯಗಳಿಗೆ ದರಪಟ್ಟಿ ಹಣ ಪ್ರಕಾರ ಹಣ ಪಡೆಯದೆ ಮನಬಂದಂತೆ ಹೆಚ್ಚು ಹಣ ವಸೂಲಿ ಮಾಡುತ್ತಿದ್ದಾರೆ. ಅಲ್ಲದೆ ಪಟ್ಟಣದಲ್ಲಿ ಸ್ವಚ್ಛತೆ ಒಳಗೊಂಡು ಯಾವುದೇ ಮೂಲಭೂತ ಸೌಕರ್ಯಗಳು ಕೂಡ ಸಮರ್ಪಕವಾಗಿ ನಡೆಯುತ್ತಿಲ್ಲ ಹೆಚ್ಚಿಗೆ ಹಣ ವಸೂಲಿ ಮಾಡಿದ ಸಿಬ್ಬಂದಿ ಮೇಲೆ ಆರೋಪ ಪಟ್ಟಿಯನ್ನೇ ತೆರೆದಿಡುತ್ತಿದ್ದಾರೆ.ಸಾರ್ವಜನಿಕರು ಬೆಂಬಲ ನೀಡಿ ಸಾಕ್ಷಾಧಾರ ಒದಗಿಸುತ್ತಿದ್ದಾರೆ. ಬೃಷ್ಟಾಚಾರ ಮಾಡಿದವರ ಮೇಲೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸತ್ಯಾಗ್ರಹದಲ್ಲಿ ಮಧುಸುದನ ರಾಂದಡ, ಶ್ರೀಕಾಂತ ಭಾವಿ, ಪ್ರಶಾಂತ ಜವಳಿ, ಪ್ರಕಾಶ ಶೇಬಿನಕಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.