ADVERTISEMENT

ಹಂಪಿ ವಿ.ವಿ ಕೇಂದ್ರ ಅಲ್ಲಿಯೇ ಉಳಿಸಿಕೊಳ್ಳಿ

ಪ್ರವಾಸೋದ್ಯಮ ಸಚಿವರಿಗೆ ಕರೆ ಮಾಡಿ ಒತ್ತಾಯಿಸಿದ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2019, 12:35 IST
Last Updated 6 ಡಿಸೆಂಬರ್ 2019, 12:35 IST
ಬಾದಾಮಿ ಸಮೀಪದ ಬನಶಂಕರಿಯಲ್ಲಿರುವ ಹಂಪಿ ವಿಶ್ವವಿದ್ಯಾಲಯದ ಶಿಲ್ಪ ಮತ್ತು ಚಿತ್ರಕಲಾ ಕೇಂದ್ರವನ್ನು  ಅಲ್ಲಿಯೇ ಉಳಿಸಿಕೊಳ್ಳುವಂತೆ ಬಾದಾಮಿ ಪರಿಸರದ ವಿವಿಧ ಸಂಘಟನೆಗಳ ಸದಸ್ಯರು ಗುರುವಾರ ಶಾಸಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಬಾದಾಮಿ ಸಮೀಪದ ಬನಶಂಕರಿಯಲ್ಲಿರುವ ಹಂಪಿ ವಿಶ್ವವಿದ್ಯಾಲಯದ ಶಿಲ್ಪ ಮತ್ತು ಚಿತ್ರಕಲಾ ಕೇಂದ್ರವನ್ನು  ಅಲ್ಲಿಯೇ ಉಳಿಸಿಕೊಳ್ಳುವಂತೆ ಬಾದಾಮಿ ಪರಿಸರದ ವಿವಿಧ ಸಂಘಟನೆಗಳ ಸದಸ್ಯರು ಗುರುವಾರ ಶಾಸಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.   

ಬಾಗಲಕೋಟೆ: ಬಾದಾಮಿ ಸಮೀಪದ ಬನಶಂಕರಿಯಲ್ಲಿರುವ ಹಂಪಿ ವಿಶ್ವವಿದ್ಯಾಲಯದ ಶಿಲ್ಪ ಮತ್ತು ಚಿತ್ರಕಲಾ ಕೇಂದ್ರವನ್ನು ಬೇರೆಡೆಗೆ ಎತ್ತಂಗಡಿ ಮಾಡದಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಬಾದಾಮಿಯಲ್ಲಿ ಶುಕ್ರವಾರ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರಿಗೆ ಕರೆ ಮಾಡಿ ಮಾತನಾಡಿದ ಸಿದ್ದರಾಮಯ್ಯ, ಆ ಜಾಗದಲ್ಲಿ ಉದ್ದೇಶಿತ ತ್ರಿ–ಸ್ಟಾರ್ ಹೋಟೆಲ್ ನಿರ್ಮಿಸುವ ಪ್ರಸ್ತಾವನೆ ಕೈ ಬಿಡುವಂತೆ ಆಗ್ರಹಿಸಿದರು.

ಬಾದಾಮಿ ಕ್ಷೇತ್ರದಲ್ಲಿ ಪ್ರವಾಸೋದ್ಯಮ ಇಲಾಖೆಗೆ ಸೇರಿದ ಜಾಗ ಬೇರೆ ಬೇರೆ ಕಡೆ ಇದೆ. ಅಲ್ಲಿ ಹೋಟೆಲ್ ನಿರ್ಮಿಸುವುದು ಸೂಕ್ತ ಎಂದರು.

ADVERTISEMENT

ಇದೇ ವೇಳೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಅವರಿಗೆ ಕರೆ ಮಾಡಿದ ಸಿದ್ದರಾಮಯ್ಯ, ’ಶಿಲ್ಪ ಮತ್ತು ಚಿತ್ರಕಲಾ ಕೇಂದ್ರದ ಸಿಬ್ಬಂದಿಗೆ ವೇತನ ವಿತರಣೆಯಲ್ಲಿ ಆಗಿರುವ ವಿಳಂಬವನ್ನು ಸರಿಪಡಿಸುವಂತೆ‘ ಹೇಳಿದರು.

ಪ್ರಜಾವಾಣಿ ವರದಿ ಫಲಶ್ರುತಿ:ಹೋಟೆಲ್ ನಿರ್ಮಾಣ ಹಿನ್ನೆಲೆ ಬನಶಂಕರಿಯಲ್ಲಿರುವ ಹಂಪಿ ವಿಶ್ವವಿದ್ಯಾಲಯದ ಶಿಲ್ಪ ಮತ್ತು ಚಿತ್ರಕಲಾ ಕೇಂದ್ರವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಕೇಂದ್ರದ ಮುಖ್ಯಸ್ಥರಿಗೆ ಪತ್ರ ಬರೆದಿದ್ದರು. ಆ ಬಗ್ಗೆ ‘ಪ್ರಜಾವಾಣಿ’ ಡಿಸೆಂಬರ್ 3ರಂದು ವಿಶೇಷ ವರದಿ ಪ್ರಕಟಿಸಿತ್ತು. ಕೇಂದ್ರವನ್ನು ಅಲ್ಲಿಯೇ ಉಳಿಸಿಕೊಳ್ಳುವಂತೆ ಬಾದಾಮಿ ಪರಿಸರದ ವಿವಿಧ ಸಂಘಟನೆಗಳು ಗುರುವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.