ADVERTISEMENT

ಪ್ರಜಾವಾಣಿ ವರದಿ ಪರಿಣಾಮ: ಹರಿದ್ರಾತೀರ್ಥ ಪುಷ್ಕರಣಿ ಸ್ವಚ್ಛತಾ ಕಾರ್ಯ ಆರಂಭ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2025, 2:53 IST
Last Updated 10 ನವೆಂಬರ್ 2025, 2:53 IST
ಬಾದಾಮಿ ಸಮೀಪದ ಬನಶಂಕರಿ ದೇವಾಲಯದ ಎದುರಿನ ಹರಿದ್ರಾತೀರ್ಥ ಪುಷ್ಕರಣಿಯನ್ನು ಕಾರ್ಮಿಕರು ಸ್ವಚ್ಛಗೊಳಿಸಿದರು
ಬಾದಾಮಿ ಸಮೀಪದ ಬನಶಂಕರಿ ದೇವಾಲಯದ ಎದುರಿನ ಹರಿದ್ರಾತೀರ್ಥ ಪುಷ್ಕರಣಿಯನ್ನು ಕಾರ್ಮಿಕರು ಸ್ವಚ್ಛಗೊಳಿಸಿದರು   

ಬಾದಾಮಿ: ಸಮೀಪದ ಬನಶಂಕರಿ ದೇವಾಲಯದ ಎದುರಿನ ಹರಿದ್ರಾತೀರ್ಥ ಪುಷ್ಕರಣಿಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಭಾನುವಾರ ಸ್ವಚ್ಛಗೊಳಿಸುವ ಕಾರ್ಯ ಆರಂಭಿಸಿದೆ.

ಪುಷ್ಕರಣಿಯ ಈಶಾನ್ಯ ಭಾಗದಲ್ಲಿ ತ್ಯಾಜ್ಯ ಭರ್ತಿಯಾಗಿ ದುರ್ವಾಸನೆ ಹಬ್ಬಿತ್ತು. ಈ ಕುರಿತು ನ.6 ರಂದು ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ವರದಿಗೆ ಸ್ಫಂದಿಸಿದ ಎಎಸ್ಐ ಇಲಾಖೆ ಅಧಿಕಾರಿಗಳು, ಕಾರ್ಮಿಕರ ಮೂಲಕ ಸ್ವಚ್ಛತೆ ಕಾರ್ಯ ಆರಂಭಿಸಲಾಗಿದೆ.

ಹರಿದ್ರಾತೀರ್ಥ ಪುಷ್ಕರಣಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗುವುದು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧೀಕ್ಷಕ ರಮೇಶ ಮೂಲಿಮನಿ ಮತ್ತು ಸ್ಥಳೀಯ ಅಧಿಕಾರಿ ಅನಿರುದ್ಧ ದೇಸಾಯಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.