ADVERTISEMENT

ಆರೋಗ್ಯವೇ ದೇಶದ ಸಂಪತ್ತು: ಬಸವಾನಂದ ಶ್ರೀ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2024, 12:59 IST
Last Updated 3 ಏಪ್ರಿಲ್ 2024, 12:59 IST
ಮಹಾಲಿಂಗಪುರದ ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಆರೋಗ್ಯ ಮತ್ತು ಆಧ್ಯಾತ್ಮಿಕ ಅರಿವು’ ಕಾರ್ಯಕ್ರಮದ ಆರನೇ ದಿನದ ಕಾರ್ಯಕ್ರಮದಲ್ಲಿ ಬಸವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು
ಮಹಾಲಿಂಗಪುರದ ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಆರೋಗ್ಯ ಮತ್ತು ಆಧ್ಯಾತ್ಮಿಕ ಅರಿವು’ ಕಾರ್ಯಕ್ರಮದ ಆರನೇ ದಿನದ ಕಾರ್ಯಕ್ರಮದಲ್ಲಿ ಬಸವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು   

ಮಹಾಲಿಂಗಪುರ: ‘ಆರೋಗ್ಯಕ್ಕೆ ಮೊದಲ ಆದ್ಯತೆ ಕೊಡದೇ ಇರುವುದಕ್ಕೆ ರೋಗಿಗಳ ಸಂಖ್ಯೆ ಹೆಚ್ಚಿದೆ. ಆರೋಗ್ಯವೇ ದೇಶದ ಸಂಪತ್ತು. ದೇಶದ ಆರೋಗ್ಯ ಕಾಪಾಡುವ ಕಡೆಗೆ ಗಮನ ಕೊಡಬೇಕು’ ಎಂದು ಮನಗುಂಡಿ ಮಹಾಮನೆಯ ಬಸವಾನಂದ ಸ್ವಾಮೀಜಿ ಹೇಳಿದರು.

ಪಟ್ಟಣದ ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದಲ್ಲಿ ಸಿ.ಎಂ.ಹುರಕಡ್ಲಿ ಫೌಂಡೇಷನ್ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಆರೋಗ್ಯ ಮತ್ತು ಆಧ್ಯಾತ್ಮಿಕ ಅರಿವು’ ಕಾರ್ಯಕ್ರಮದ ಆರನೇ ದಿನದ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದ ಸಹಜಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ‘ಮುಕ್ತಿಯನ್ನು ಪಡೆಯುವ ಸಾಮರ್ಥ್ಯ ಮಾನವನಿಗೆ ಮಾತ್ರ ಇದೆ. ದೇವತೆಗಳಿಗೆ, ಪಶುಪಕ್ಷಿಗಳಿಗೂ ಮುಕ್ತಿ ಇಲ್ಲ. ಇಂತಹ ಪುಣ್ಯ ಶರೀರವನ್ನು ಕೆಡಿಸದೇ ಮಾನವ ಜನ್ಮವನ್ನು ಸಾರ್ಥಕ ಪಡಿಸಿಕೊಳ್ಳಬೇಕು’ ಎಂದರು.

ADVERTISEMENT

ಕಲಾವಿದ ಶಿವಾನಂದ ಬಿದರಿ ಗಾಯನ ಪ್ರಸ್ತುತಪಡಿಸಿದರು. ಸಿದ್ಧಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಫೌಂಡೇಷನ್ ಸಂಸ್ಥಾಪಕ ಚನಬಸು ಹುರಕಡ್ಲಿ ಇದ್ದರು.

ಮಹಾಲಿಂಗಪುರದ ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಆರೋಗ್ಯ ಮತ್ತು ಆಧ್ಯಾತ್ಮಿಕ ಅರಿವು’ ಕಾರ್ಯಕ್ರಮದ ಆರನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಕ್ತರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.