
ಬಾಗಲಕೋಟೆಯ ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ ಉದ್ಘಾಟಿಸಿದರು
ಬಾಗಲಕೋಟೆ: ಇಂದಿನ ಮಕ್ಕಳು ಭವಿಷ್ಯದ ನಾಗರಿಕರು ಎನ್ನುವ ಹೇಳಿಕೆಯನ್ನು ಕಾರ್ಯರೂಪಕ್ಕೆ ತರಲು ಮಕ್ಕಳ ಆರೋಗ್ಯಕ್ಕೆ ಆದ್ಯತೆ ನೀಡಬೇಕಾಗಿದೆ. ಭವಿಷ್ಯದ ಬಲಿಷ್ಠ ಭಾರತಕ್ಕಾಗಿ ಆರೋಗ್ಯವಂತ ಮಕ್ಕಳ ಅಗತ್ಯವಿದೆ ಎಂದು ಬಿ.ವಿ.ವಿ ಸಂಘದ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ ಅಭಿಪ್ರಾಯಪಟ್ಟರು.
ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನ ಚಿಕ್ಕಮಕ್ಕಳ ವಿಭಾಗದಲ್ಲಿ ಶುಕ್ರವಾರ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತಮ ಶಿಕ್ಷಣದ ಜೊತೆಗೆ ಮಕ್ಕಳಿಗೆ ಅತ್ಯುತ್ತಮ ಆರೋಗ್ಯವನ್ನು ಕೂಡ ಒದಗಿಸಬೇಕಾಗಿದೆ ಎಂದರು.
ಚಿಕ್ಕಮಕ್ಕಳ ತಜ್ಞವೈದ್ಯರು ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಥಲಸ್ಸೇಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡಲು ಥಲಸ್ಸೇಮಿಯಾ ಮತ್ತು ಹಿಮೋಫಿಲಿಯಾ ಸೊಸೈಟಿ ಸ್ಥಾಪಿಸಲಾಗಿದೆ ಎಂದರು.
ವೈದ್ಯಕೀಯ ಅಧೀಕ್ಷಕ ಡಾ.ಶ್ರೀರಾಮ ಕೋರಾ, ಚಿಕ್ಕಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಅಶೋಕ ಬಡಕಲಿ, ಚಿಕ್ಕಮಕ್ಕಳ ತಜ್ಞವೈದ್ಯರಾದ ಡಾ.ರಮೇಶ ಪೋಳ, ಡಾ.ತಳವಾರ, ಡಾ.ವಿನಯಕುಮಾರ, ಡಾ.ರಮೇಶ ನೀಲನ್ನವರ, ಡಾ.ಪ್ರವೀಣ, ಡಾ.ಮನೋಜ, ಡಾ.ಅನೀತಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.