
ಪ್ರಜಾವಾಣಿ ವಾರ್ತೆ
ರಬಕವಿ ಬನಹಟ್ಟಿ: ಸಮೀಪದ ಹಿಪ್ಪರಗಿ ಬ್ಯಾರೇಜ್‌ನ 22ನೇ ಗೇಟ್ ಕಿತ್ತುಹೋಗಿದ್ದರಿಂದ ಬ್ಯಾರೇಜ್‌ನಿಂದ ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದ್ದು, ರಬಕವಿ ಬನಹಟ್ಟಿ ಸಮೀಪದ ಕೃಷ್ಣಾ ನದಿಯಲ್ಲಿಯ ನೀರಿನ ಮಟ್ಟ ಕಡಿಮೆಯಾಗುತ್ತಿದೆ.
ಗೇಟ್ ದುರಸ್ತಿ ಕಾರ್ಯಕ್ಕೆ ಹೊಸಪೇಟಿಯಿಂದ ತಾಂತ್ರಿಕ ಪರಿಣತರನ್ನು ಕರೆಯಿಸಲಾಗಿದೆ. ಹತ್ತಾರು ಸಕ್ಕರೆ ಕಾರ್ಖಾನೆಗಳ ತಾಂತ್ರಿಕ ವರ್ಗದ ಸಿಬ್ಬಂದಿ ಸೇರಿದಂತೆ 40ಕ್ಕಿಂತ ಹೆಚ್ಚು ಜನರು ಗೇಟ್ ದುರಸ್ತಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
‘ನೀರಿನ ಹರಿವು ಹೆಚ್ಚಾಗಿದ್ದರಿಂದ ಅಳವಡಿಸುತ್ತಿರುವ ಗೇಟ್‌ಗಳೂ ಕೊಚ್ಚಿಕೊಂಡು ಹೋಗುತ್ತಿವೆ. ಈಗಾಗಲೇ ಅಂದಾಜು 1.5 ಟಿಎಂಸಿ ಅಡಿಗಿಂತ ಹೆಚ್ಚು ನೀರು ಹರಿದು ಹೋಗಿದೆ’ ಎಂದು ಬ್ಯಾರೇಜ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.