ADVERTISEMENT

ಎಚ್‌ಐವಿ, ಏಡ್ಸ್ ಜಾಗೃತಿಗಾಗಿ ಮ್ಯಾರಾಥಾನ್: ಸಂಗಮೇಶ, ಮಹಾಲಕ್ಷ್ಮಿ ಪ್ರಥಮ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2025, 6:32 IST
Last Updated 21 ಸೆಪ್ಟೆಂಬರ್ 2025, 6:32 IST
ಬಾಗಲಕೋಟೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮ್ಯಾರಾಥಾನ್‌ ಸ್ಪರ್ಧೆಗೆ ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ ಚಾಲನೆ ನೀಡಿದರು
ಬಾಗಲಕೋಟೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮ್ಯಾರಾಥಾನ್‌ ಸ್ಪರ್ಧೆಗೆ ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ ಚಾಲನೆ ನೀಡಿದರು   

ಬಾಗಲಕೋಟೆ: ಎಚ್ಐವಿ, ಏಡ್ಸ್ ಜಾಗೃತಿಗಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ 5 ಕಿ.ಮೀ ಮ್ಯಾರಥಾನ್ ಸ್ಪರ್ಧೆಯಲ್ಲಿ ಪುರುಷರ ವಿಭಾಗದಲ್ಲಿ ಸಂಗಮೇಶ ಹಳ್ಳಿ, ಮಹಿಳೆಯರ ವಿಭಾಗದಲ್ಲಿ ಮಹಾಲಕ್ಷ್ಮಿ ಬಸಕಾಳಿ ಪ್ರಥಮ ಸ್ಥಾನ ಪಡೆದರು.

ಪುರುಷರ ವಿಭಾಗ: ಸಂಗಮೇಶ ಹಳ್ಳಿ (ಪ್ರಥಮ), ದರ್ಶನ ಗೌಡರ (ದ್ವಿತೀಯ), ಮಂಜುನಾಥ ಬೇಲೂರಪ್ಪನವರ (ತೃತೀಯ). ಮಹಿಳಾ ವಿಭಾಗ: ಮಹಾಲಕ್ಷ್ಮೀ ಬಸಕಾಳಿ (ಪ್ರಥಮ), ಮೀನಾಕ್ಷಿ ಚಲವನ್ನವರ (ದ್ವಿತೀಯ), ದೀಪಾ ಸನದಿ (ತೃತೀಯ). ಪ್ರಥಮ ಸ್ಥಾನ ಪಡೆದವರಿಗೆ ₹5 ಸಾವಿರ, ದ್ವಿತೀಯ ₹3,500, ತೃತೀಯ ₹2,500 ನಗದು, ಪ್ರಶಸ್ತಿ ಪತ್ರ ಹಾಗೂ ಮೆಡಲ್ ನೀಡಲಾಯಿತು. 

ಇದಕ್ಕೂ ಮುನ್ನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಶನಿವಾರ ಸ್ಪರ್ಧೆಗೆ ಚಾಲನೆ ನೀಡಿದರು.

ADVERTISEMENT

ನಂತರ ಮಾತನಾಡಿದ ಅವರು, ಎಚ್ಐವಿ ತಡೆಗಟ್ಟಲು ತೀವ್ರಗೊಳಿಸಿದ ಐಇಸಿ ಪ್ರಚಾರಾಂದೋಲನ ಅಂಗವಾಗಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದರು.

ಎಚ್ಐವಿ, ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯ ತಡೆಗಟ್ಟುವುದು, ನ್ಯಾಕೋ ಏಡ್ಸ್ ಆ್ಯಪ್, ಉಚಿತ ರಾಷ್ಟ್ರೀಯ ಸಹಾಯವಾಣಿ-1097 ಸೇರಿದಂತೆ ವಿವಿಧ ಮಾಹಿತಿಗಳ ಬಗ್ಗೆ ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು. 

ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ ಡಿ, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಸುವರ್ಣ ಕುಲಕರ್ಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಕಲಾ ಶಿನ್ನೂರ, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಡಿ.ಜಿ.ಹೊಸಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.