ADVERTISEMENT

ಹುನಗುಂದ| ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನ ನಮ್ಮದು: ಪರಶುರಾಮ ಮಹಾರಾಜನವರ

​ಪ್ರಜಾವಾಣಿ ವಾರ್ತೆ
Published 25 ಜನವರಿ 2026, 4:40 IST
Last Updated 25 ಜನವರಿ 2026, 4:40 IST
ಹುನಗುಂದದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸತ್ಯಶೋಧಕ ಸಂಘದ ಸಹಯೋಗದಲ್ಲಿ ಶನಿವಾರ ನಡೆದ 'ಸಂವಿಧಾನ ಜಾಗೃತಿಯಾನ' ಕಾರ್ಯಕ್ರಮದಲ್ಲಿ ಪರಶುರಾಮ ಮಹಾರಾಜನವರ ಮಾತನಾಡಿದರು
ಹುನಗುಂದದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸತ್ಯಶೋಧಕ ಸಂಘದ ಸಹಯೋಗದಲ್ಲಿ ಶನಿವಾರ ನಡೆದ 'ಸಂವಿಧಾನ ಜಾಗೃತಿಯಾನ' ಕಾರ್ಯಕ್ರಮದಲ್ಲಿ ಪರಶುರಾಮ ಮಹಾರಾಜನವರ ಮಾತನಾಡಿದರು   

ಹುನಗುಂದ: ನಮ್ಮ ಸಂವಿಧಾನವು ಜಗತ್ತಿನಲ್ಲಿಯೇ ಶ್ರೇಷ್ಠ ಮತ್ತು ವಿಶಿಷ್ಠ ಸಂವಿಧಾನವಾಗಿದೆ ಎಂದು ಸತ್ಯಶೋಧಕ ಸಂಘದ ರಾಜ್ಯ ಘಟಕದ ಅಧ್ಯಕ್ಷ ಪರಶುರಾಮ ಮಹಾರಾಜನವರ ಅಭಿಪ್ರಾಯಪಟ್ಟರು.

ಅವರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸತ್ಯಶೋಧಕ ಸಂಘದ ಸಹಯೋಗದಲ್ಲಿ ಶನಿವಾರ ನಡೆದ 'ಸಂವಿಧಾನ ಜಾಗೃತಿಯಾನ' ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿ ಅವರು ಮಾತನಾಡಿದರು. 

ಭಾರತದಲ್ಲಿ ಆಚರಣೆಯಲ್ಲಿದ್ದ ಹಲವು ಅನಿಷ್ಟ ಪದ್ಧತಿಗಳನ್ನು ತೊಲಗಿಸಿ ಸಾಮಾಜಿಕ ಸಮಾನತೆ, ಸಾಮರಸ್ಯವನ್ನು ಬೋಧಿಸುತ್ತಾ ಪ್ರಗತಿಯಡೆಗೆ ದೇಶವನ್ನು ಮುನ್ನಡೆಸುವ ಗ್ರಂಥವೇ ಸಂವಿಧಾನವಾಗಿದೆ ಎಂದ ಅವರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ ಅವರ ಜೀವನದ ಹಲವು ಘಟನಗಳನ್ನು ನೆನಪಿಸಿದರು.

ADVERTISEMENT

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿಜಯ ಗದ್ದನಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಸಿಕಂದರ್ ಧನ್ನೂರ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಎಸ್. ಜಿ. ಎಮ್ಮಿ, ರಾಣಿ ತೋಪಲಕಟ್ಟಿ, ದೇವು ಡಂಬಳ ಪ್ರಾಧ್ಯಾಪಕರ ಸುರೇಶ ಎಚ್. ಎಸ್. ಉಪಸ್ಥಿತರಿದ್ದರು. ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಬಿ. ವೈ. ಅಲೂರ ನಿರೂಪಿಸಿದರು. ವಿದ್ಯಾರ್ಥಿನಿ ಕೀರ್ತಿ ಗಡಗಿ ಪ್ರಾರ್ಥಿಸಿದರು.

ಹುನಗುಂದದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸತ್ಯಶೋಧಕ ಸಂಘದ ಸಹಯೋಗದಲ್ಲಿ ನಡೆದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.