ಹುನಗುಂದದ ಅಜಾದ್ ನಗರದ ಸರ್ಕಾರಿ ಉರ್ದು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಿದರು
ಹುನಗುಂದ: ‘ಫ್ರೀಡಂ ಅಲ್ಪಸಂಖ್ಯಾತರ ಕ್ಷೇಮಾಭಿವೃದ್ಧಿ ಸಂಘ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ’ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಅಜಾದ್ ನಗರದಲ್ಲಿರುವ ಸರ್ಕಾರಿ ಉರ್ದು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಆವರಣದಲ್ಲಿ ಗುರುವಾರ ಫ್ರೀಡಂ ಅಲ್ಪಸಂಖ್ಯಾತರ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ ಮಾತನಾಡಿದರು.
ಎಸ್‌ಡಿಎಂಸಿ ಅಧ್ಯಕ್ಷ, ಸದಸ್ಯರು ಹಾಗೂ ಸಮಾಜದ ಮುಖಂಡರು ಕಾಂಪೌಂಡ್, ಚರಂಡಿ, ಪ್ರೌಢ ಶಾಲೆಗೆ ಕೊಠಡಿ ನಿರ್ಮಾಣ ಸೇರಿದಂತೆ ಇತರೆ ಬೇಡಿಕೆಗಳನ್ನು ಶಾಸಕರಿಗೆ ಸಲ್ಲಿಸಿದರು.
ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಬಿ.ಡಿ.ಚಿತ್ತರಗಿ, ಎಚ್.ಎ.ಸೌದಾಗರ, ಮಂಜುಶ್ರೀ ಮಣಿ, ದೇವಮ್ಮ ದೇವದುರ್ಗ ಅವರನ್ನು ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಶಬ್ಬೀರ್ ಮುಲ್ಲಾ, ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ಮಹಮ್ಮದ್ ದೋಟಿಹಾಳ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಎಸ್ ಡಿಎಂಸಿ ಅಧ್ಯಕ್ಷ ರಾದ ರಿಜ್ವಾನ್ ಪಟೇಲ್, ರಫೀಕ್ ವಾಲಿಕಾರ, ಪುರಸಭೆ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ, ಮುಖ್ಯ ಶಿಕ್ಷಕರಾದ ಬಸವರಾಜ ಹೊಸಮನಿ, ಮೌಲಾಲಿ ಮುಲ್ಲಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.