ADVERTISEMENT

ಹುನಗುಂದ: ಬೆಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2025, 4:31 IST
Last Updated 3 ಸೆಪ್ಟೆಂಬರ್ 2025, 4:31 IST
<div class="paragraphs"><p>ಹುನಗುಂದ ಮಳೆಯಿಂದ ಹಾನಿಯಾದ ಪಟ್ಟಣದ ಹೊರವಲಯದ ಜಮೀನಿಗೆ ಜಿಲ್ಲಾಧಿಕಾರಿ ಸಂಗಪ್ಪ ಭೇಟಿ ನೀಡಿದರು</p></div>

ಹುನಗುಂದ ಮಳೆಯಿಂದ ಹಾನಿಯಾದ ಪಟ್ಟಣದ ಹೊರವಲಯದ ಜಮೀನಿಗೆ ಜಿಲ್ಲಾಧಿಕಾರಿ ಸಂಗಪ್ಪ ಭೇಟಿ ನೀಡಿದರು

   

ಹುನಗುಂದ: ತಾಲ್ಲೂಕಿನಲ್ಲಿ ಸತತ ಮಳೆಯಿಂದ ಬೆಳೆಗಳು ಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸಂಗಪ್ಪ ಭೇಟಿ ನೀಡಿದರು.

ಈ ಬಾರಿ ನಿರಂತರ ಮಳೆಯಿಂದ ತೊಗರಿ, ಈರುಳ್ಳಿ, ಮೆಣಸಿನಕಾಯಿ ಹಾಗೂ ಹೆಸರು ಬೆಳೆಗಳಿಗೆ ಹೆಚ್ಚಿನ ಹಾನಿ ಸಂಭವಿಸಿದೆ.

ADVERTISEMENT

ಹುನಗುಂದ ಮತ್ತು ಅಮೀನಗಡ ಹೋಬಳಿ ವ್ಯಾಪ್ತಿಯ ಕಮತಗಿ, ರಾಮಥಾಳ, ಅಮೀನಗಡ, ಹಿರೇಯರನಕೇರಿ, ಬೇವಿನಮಟ್ಟಿ, ಹಿರೇಬಾದವಾಡಗಿ ಹಾಗೂ ಹುನಗುಂದದ ಜಮೀನುಗಳಿಗೆ ಭೇಟಿ ನೀಡಿ ಬೆಳೆಗಳ ಹಾನಿ ಬಗ್ಗೆ ರೈತರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸತತ ಮಳೆಗೆ ಬೆಳೆಗಳು ಹಾಳಾಗುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ನಮಗೆ ದಿಕ್ಕುತೋಚದಂತಾಗಿದೆ ಸೂಕ್ತ ಪರಿಹಾರ ನೀಎಬೇಕು ಎಂದು ರೈತರು ಜಿಲ್ಲಾಧಿಕಾರಿ ಬಳಿ ಮನವಿ ಮಾಡಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಲಕ್ಷ್ಮಣ ಕಳ್ಳೆನ್ನವರ, ಕೃಷಿ ಇಲಾಖೆ ಉಪನಿರ್ದೇಶಕ ಎಲ್.ಐ ರೂಡಗಿ, ತೋಟಗಾರಿಕೆ ಉಪನಿರ್ದೇಶಕ ರವೀಂದ್ರ ಹಕಾಟೆ, ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ಸಹಾಯಕ ಕೃಷಿ ನಿರ್ದೇಶಕ ಸೋಮಲಿಂಗಪ್ಪ ಅಂಟರತಾನಿ, ತೋಟಗಾರಿಕೆ ಸಹಾಯಕ ನಿರ್ದೇಶಕ ಸುಭಾಷ್ ಸುಲ್ಪಿ, ರೈತ ಸಂಪರ್ಕ ಕೇಂದ್ರ ಅಧಿಕಾರಿಗಳಾದ ರಾಘವೇಂದ್ರ ಜಾದವ್, ಮಹೇಶ ಕಟಗೇರಿ, ಬಾಗಲಕೋಟೆ ತೋಟಗಾರಿಕೆ ವಿಶ್ವ ವಿದ್ಯಾಲಯದ ವಿಜ್ಞಾನಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.