ADVERTISEMENT

ಹೆಚ್ಚಿದ ಮಂಗನ ಕಾಯಿಲೆ; ಆತಂಕ

ವ್ಯಾಪಕವಾಗಿ ಹರಡುವ ಮುನ್ನ ಅಗತ್ಯ ಕ್ರಮಕೈಗೊಳ್ಳಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2024, 4:56 IST
Last Updated 28 ಏಪ್ರಿಲ್ 2024, 4:56 IST

ಕುಳಗೆರಿ ಕ್ರಾಸ್: ಕುಳಗೇರಿ ಹೋಬಳಿಯಲ್ಲಿ ಕೆಲವು ದಿನಗಳಿಂದ ಮಕ್ಕಳಲ್ಲಿ ಮಂಗನಬಾವು ಕಾಯಿಲೆ ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.

ಕುಳಗೇರಿ, ಖಾನಾಪುರ ಎಸ್.ಕೆ., ಚಿರ್ಲಕೊಪ್ಪ, ಸೋಮನಕೊಪ್ಪ, ನರಸಾಪುರ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಮಂಗನಕಾಯಿಲೆ ವ್ಯಾಪಕವಾಗಿ ಹರಡುತ್ತಿದೆ. ಮಂಗನಬಾವು ಕಾಯಿಲೆ ಕಾಣಿಸಿಕೊಂಡ 3–4 ಮಕ್ಕಳು ನಿತ್ಯ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುತ್ತಿದ್ದಾರೆ. ರೋಗ ವ್ಯಾಪಕವಾಗಿ ಹರಡುವ ಮುನ್ನ ಅಗತ್ಯ ಕ್ರಮಕೈಗೊಳ್ಳಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ. 

‘ಗ್ರಾಮದಲ್ಲಿ ಮಂಗನ ಕಾಯಿಲೆ ಹರಡುತ್ತಿದೆ. ಮಕ್ಕಳು ಹೈರಾಣುಗುತ್ತಿದ್ದಾರೆ. ಅವರನ್ನು ಮನೆಯಿಂದ ಹೊರಗೆ ಕಳಿಸಲಾಗುತ್ತಿಲ್ಲ’ ಎಂದು ಗ್ರಾಮ ಪಂಚಾಯ್ತಿ ಸದಸ್ಯ ಸಣ್ಣಬೀರಪ್ಪ ದ್ಯಾವನಗೌಡ್ರ ಹಾಗೂ ರಾಮನಗೌಡ ದ್ಯಾವನಗೌಡ್ರ ಹೇಳಿದರು.

ADVERTISEMENT

ಈ ಕುರಿತು ಪ್ರತಿಕ್ರಿಯಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸುನೀಲ ರಾಠೋಡ, ‘ಮಂಗನ ಕಾಯಿಲೆಯ ಲಕ್ಷಣಗಳು ಹಾಗೂ ರೋಗ ತಡೆಗಟ್ಟುವ ವಿಧಾನಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಸೋಂಕಿತರ ಸಂಪರ್ಕದಿಂದ ದೂರವಿರುವುದರಿಂದ ಇತರರಿಗೆ ಹರಡುವುದನ್ನು ತಡೆಗಟ್ಟಬಹುದು’ ಎಂದು ತಿಳಿಸಿದರು.

‘ಜ್ವರ ಮತ್ತು ದೇಹದ ಭಾಗಗಳ ನೋವು ಕಡಿಮೆ ಮಾಡಲು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಬಾವು ನಿಧಾನಗತಿಯಲ್ಲಿ ಇಳಿಮುಖವಾಗುತ್ತದೆ’ ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.