
ಇಳಕಲ್: ‘ಭಾರತದ ಜನತೆಯಾದ ನಾವು ಬಾಬಾಸಾಹೇಬ ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾದ ನಮ್ಮ ದೇಶದ ಸಂವಿಧಾನವನ್ನು ಅರ್ಪಿಸಿಕೊಂಡು ಇಂದಿಗೆ 77 ವರ್ಷಗಳಾಗದವು. ಸಂವಿಧಾನದ ಬಗ್ಗೆ ಅಸಹನೆ ಹೊಂದಿರುವ ವ್ಯಕ್ತಿಗಳು ಸಂವಿಧಾನ ಬದಲಾಯಿಸುವ ಮಾತುಗಳನ್ನು ಆಡುತ್ತಿದ್ದು, ಈ ಬಗ್ಗೆ ಎಚ್ಚರ ವಹಿಸುವ ಅಗತ್ಯವಿದೆ’ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಅವರು ಇಲ್ಲಿಯ ತಹಶೀಲ್ದಾರ್ ಕಚೇರಿ ಮುಂದೆ ತಾಲ್ಲೂಕು ಆಡಳಿತದಿಂದ ಆಯೋಜಿಸಿದ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಗಾಂಧೀಜಿಯವರನ್ನು ನಿಂದಿಸುವ, ಅಪಮಾನಿಸುವ ಕೃತ್ಯ ನಡೆಯುತ್ತಿದೆ. ಗ್ರಾಮೀಣ ಜನತೆಗೆ ಉದ್ಯೋಗದ ಖಾತ್ರಿ ನೀಡಿದ್ದ ನರೇಗಾ ಯೋಜನೆಯ ಹೆಸರು ಮಾತ್ರವಲ್ಲ, ಬಡವರ ಉದ್ಯೋಗದ ಹಕ್ಕನ್ನು ಕೇಂದ್ರ ಸರ್ಕಾರ ಕಿತ್ತು ಹಾಕಿದೆ. ಈ ಬಗ್ಗೆ ದೇಶದಾದ್ಯಂತ ಒಗ್ಗಟ್ಟಿನಿಂದ ಹೋರಾಟ ನಡೆಸಲು ಜನರು ಸಿದ್ದರಾಗಬೇಕು’ ಎಂದರು.
‘ಕೇಂದ್ರದ ಪಕ್ಷಪಾತ ನಿಲುವಿನಿಂದಾಗಿ ನಮ್ಮ ರಾಜ್ಯದ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ’ ಎಂದು ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದರು.
ತಹಶೀಲ್ದಾರ್ ಅಮರೇಶ ಪಮ್ಮಾರ್ ಧ್ವಜಾರೋಹಣ ನೆರವೇರಿಸಿದರು. ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡರು, ವಿವಿಧ ಇಲಾಖೆಗಳ ಸಿಬ್ಭಂದಿ, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.