
ಬಾಗಲಕೋಟೆ: ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೇ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ತೆರವು ಮಾಡಬೇಕು ಎಂದು ಗುರುವಾರ ನಾಗರಿಕ ಹಿತರಕ್ಷಣಾ ವೇದಿಕೆ ಮುಖಂಡರು ಮನವಿ ಸಲ್ಲಿಸಿದರು.
ಸೆಕ್ಟರ್ ನಂ.64, 65ರಲ್ಲಿ ಅನುಮತಿ ಇಲ್ಲದೇ ಮಸೀದಿಗಳ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಅವುಗಳಿಗೆ ಅನುಮತಿ ಪಡೆದಿಲ್ಲ. ನಿರ್ಮಾಣ ನಿಲ್ಲಿಸುವಂತೆ ತಿಳಿಸಿದ್ದರೂ, ನಿರ್ಮಾಣ ಕಾರ್ಯ ಮುಂದುವರೆಲಾಗಿದೆ ಎಂದು ದೂರಿದರು.
ಬಿಟಿಡಿಎ ಷರತ್ತುಗಳನ್ನು ಉಲ್ಲಂಘಿಸಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಕೂಡಲೇ ಅವುಗಳನ್ನು ತೆರವು ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಮಾಡಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಅವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.
ಗಿರೀಶ ಭಾಂಡಗೆ, ಕುಮಾರಸ್ವಾಮಿ ಹಿರೇಮಠ, ವಿನೋದ ಸಾರಂಗಮಠ, ಪಂಕಜ್ ನಿಕ್ಕಂ, ಮಾರುತಿ, ಬಸವರಾಜ ಕೆ. ಚಂದ್ರು ರಾಮವಡಗಿ, ನಾಗಪ್ಪ ಮೊರೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.