ರಬಕವಿ ಬನಹಟ್ಟಿ: ಪ್ರಕೃತಿ ರಕ್ಷತಿ ರಕ್ಷಿತಃ ಎಂಬ ಮಾತಿನಂತೆ ಶುದ್ಧ ಗಾಳಿಯಿಂದ ಉತ್ತಮ ಆರೋಗ್ಯ ಪಡೆದುಕೊಳ್ಳಬಹುದಾಗಿದೆ. ಶಾಲಾ ಕಾಲೇಜುಗಳ ಆವರಣದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಮಕ್ಕಳು ಉತ್ತಮ ವಾತಾವರಣದಲ್ಲಿ ಕಲಿಯಲು ಸಾಧ್ಯವಾಗುತ್ತದೆ. ಪ್ರತಿಯೊಂದು ಶಾಲೆಯಲ್ಲಿ ಶಾಲಾ ಉದ್ಯಾನಗಳ ಅವಶ್ಯಕತೆ ಇದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಅವರು ಈಚೆಗೆ ಸಮೀಪದ ಜಗದಾಳ ಗ್ರಾಮದ ಪಾಟೀಲ ವಸತಿ ಶಾಲೆಯಲ್ಲಿ ಹಮ್ಮಿಕೊಂಡ ಸಸ್ಯಧಾಮವನ್ನು ಉದ್ಘಾಟಿಸಿ ಮಾತನಾಡಿದರು.
ಈಗಾಗಲೇ ಇಲ್ಲಿಯ ಶಾಲೆಗೆ ಸರ್ಕಾರ ₹ 2 ಲಕ್ಷ ಹಣವನ್ನು ಮಂಜೂರು ಮಾಡಿದೆ. ಈ ಹಣವನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು. ಮಕ್ಕಳಲ್ಲಿ ಪರಿಸರದ ಮಹತ್ವದ ಕುರಿತು ಜಾಗೃತಿ ಮೂಡಿಸಬೇಕು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಜಗದಾಳ ಗ್ರಾಮದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಿ.ಕೆ.ಸಾವಳಗಿ ಮಾತನಾಡಿ, ಶಾಲೆ ಈಗ ಪಂಚಾಯಿತಿ ಆಡಳಿತಕ್ಕೆ ಒಳಪಟ್ಟಿದೆ. ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ಯಾವುದೇ ಸಮಸ್ಯೆಗಳು ಉಂಟಾಗದಂತೆ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಇಕೋ ಕ್ಲಬ್ ಸಂಚಾಲಕ ಬಿ.ಆರ್.ಪಿ ಶಿವಪ್ರಸಾದ ಯಾದವಾಡ ಮಾತನಾಡಿದರು.
ಶಿಕ್ಷಣ ಸಂಯೋಜಕ ಬಿ.ಎಂ.ಹಳೇಮನಿ, ಸಿಆರ್‌ಪಿ ಜಗದೀಶ ಮೇತ್ರಿ, ಅರ್ಜುನ ಕಾಖಂಡಕಿ, ನೌಕರರ ಸಂಘದ ಅಧ್ಯಕ್ಷ ಬಸವರಾಜ ಹನಗಂಡಿ, ಈಶ್ವರ ಬಿರಾದಾರ, ಪವಿತ್ರಾ ತುಕ್ಕನ್ನವರ, ಆರ್.ಎಸ್.ಹೂಗಾರ, ಮಲ್ಲಿಕಾರ್ಜುನ ಗಡೆನ್ನವರ, ಸಿ.ಎಂ.ಕುಂಬಾರ, ವೈಷ್ಣವಿ ಬಾಗೇವಾಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.