ADVERTISEMENT

ಬಾಗಲಕೋಟೆ | ಹಿಪ್ಪರಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳ; ಮೈದುಂಬಿದ ಕೃಷ್ಣೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 9:23 IST
Last Updated 6 ಆಗಸ್ಟ್ 2020, 9:23 IST
   

ಬಾಗಲಕೋಟೆ: ಮಹಾರಾಷ್ಟ್ರ ಕೃಷ್ಣಾ ಕೊಳ್ಳದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ ಜಮಕಂಡಿ ತಾಲ್ಲೂಕಿನ ಹಿಪ್ಪರಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ.

ಜಲಾಶಯಕ್ಕೆ ಗುರುವಾರ 87 ಸಾವಿರ ಕ್ಯೂಸೆಕ್ಸ್ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಹೀಗಾಗಿ ಜಿಲ್ಲೆಯಲ್ಲಿ ಕೃಷ್ಣೆ ಮೈದುಂಬಿ ಹರಿಯುತ್ತಿದ್ದಾಳೆ.ಜಿಲ್ಲೆಯ ನದಿಪಾತ್ರದ ಗ್ರಾಮಗಳಲ್ಲಿ‌ ಪ್ರವಾಹದ ಭೀತಿ ವರ್ಷದ ನಂತರ ಮರುಕಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.