ADVERTISEMENT

ಅಪಾಯದ ಮಟ್ಟ ಮೀರಿದ ಘಟಪ್ರಭೆ: ಮಹಾಲಿಂಗಪುರ-ಮಿರ್ಜಿ ನಡುವೆ ಸಂಪರ್ಕ ಕಡಿತ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 8:11 IST
Last Updated 23 ಜುಲೈ 2021, 8:11 IST
ಮುಧೋಳ ತಾಲ್ಲೂಕಿನ ಮಿಜಿ೯ ಗ್ರಾಮದ ಹೊಸ ಸೇತುವೆ ಮೇಲೆ ನೀರು ಹರಿಯುತ್ತಿದೆ
ಮುಧೋಳ ತಾಲ್ಲೂಕಿನ ಮಿಜಿ೯ ಗ್ರಾಮದ ಹೊಸ ಸೇತುವೆ ಮೇಲೆ ನೀರು ಹರಿಯುತ್ತಿದೆ    

ಬಾಗಲಕೋಟೆ: ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ಘಟಪ್ರಭಾ ನದಿಗೆ ಹೆಚ್ಚುತ್ತಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಮುಧೋಳ ತಾಲ್ಲೂಕಿನ ಮಿಜಿ೯ ಗ್ರಾಮದ ಹೊಸ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಮಿಜಿ೯ ಮಹಾಲಿಂಗಪೂರ ಮಧ್ಯೆ ವಾಹನ ಸಂಪಕ೯ ಕಡಿತಗೊಂಡಿದೆ.

ಘಟಪ್ರಭಾ ನದಿಗೆ ಶುಕ್ರವಾರ 15 ಸಾವಿರ ಕ್ಯೂಸೆಕ್ ಗೂ ಅಧಿಕ ನೀರು ಹರಿದು ಬರುತ್ತಿದೆ.

ADVERTISEMENT

ಹೀಗಾಗಿ ಮುಧೋಳ ತಾಲ್ಲೂಕಿನಲ್ಲಿ ನದಿ ತೀರದ ಗ್ರಾಮಗಳಿಗೆ ಪ್ರವಾಹದ ಆತಂಕ ಎದುರಾಗಿದೆ.

ಢವಳೇಶ್ವರ ಸೇತುವೆ ಜಲಾವೃತ
ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರ ಸಮೀಪದ ಢವಳೇಶ್ವರ ಸೇತುವೆ ಶುಕ್ರವಾರ ಜಲಾವೃತಗೊಂಡಿದೆ.

ಮಹಾರಾಷ್ಟçದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಘಟಪ್ರಭಾ ನದಿ ಮೂಲಕ ಹಿಡಕಲ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರಲಾರಂಭಿಸಿದೆ. ಸೇತುವೆ ಸಂಪರ್ಕ ಹೊಂದಿದ ಹತ್ತಾರು ಗ್ರಾಮಗಳ ಗ್ರಾಮಸ್ಥರು ಪ್ರವಾಹ ಭೀತಿ ಎದುರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.