ADVERTISEMENT

ಬಾಗಲಕೋಟೆ: ಧ್ವಜಾರೋಹಣ ನೆರವೇರಿಸಿದ ಸಚಿವ ಉಮೇಶ ಕತ್ತಿ

ಪಥ ಸಂಚಲನದಲ್ಲಿ ಹೆಜ್ಜೆ ಹಾಕಿದ ಮಾಜಿ ಸೈನಿಕರ ತಂಡ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 6:36 IST
Last Updated 15 ಆಗಸ್ಟ್ 2021, 6:36 IST
ಬಾಗಲಕೋಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಮುಂಜಾನೆ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ರಾಷ್ಟಧ್ವಜಾರೋಹಣ ನೆರವೇರಿಸಿದರು.
ಬಾಗಲಕೋಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಮುಂಜಾನೆ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ರಾಷ್ಟಧ್ವಜಾರೋಹಣ ನೆರವೇರಿಸಿದರು.    

ಬಾಗಲಕೋಟೆ: ಇಲ್ಲಿನ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಮುಂಜಾನೆ ಜಿಲ್ಲಾ ಉಸ್ತುವಾರಿಯೂ ಆದ ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ರಾಷ್ಟಧ್ವಜಾರೋಹಣ ನೆರವೇರಿಸಿದರು.

ನಂತರ ನಡೆದ ಪಥಸಂಚಲನದಲ್ಲಿ ಬಿಳಿ ಷರ್ಟ್ ಹಾಗೂ ಕಪ್ಪು ಪ್ಯಾಂಟ್ ನೊಂದಿಗೆ ಪಾಲ್ಗೊಂಡಿದ್ದ ಜಿಲ್ಲೆಯ ಮಾಜಿ ಸೈನಿಕರ ತಂಡ ಗಮನ ಸೆಳೆಯಿತು. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಮಾಜಿ ಸೈನಿಕರ ತಂಡ ಪಥ ಸಂಚಲನದಲ್ಲಿ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.

ಕ್ಯಾಪ್ಟನ್ ಅರ್ಜುನ್ ಕೋರಿ ನೇತೃತ್ವದಲ್ಲಿ 22 ಮಂದಿ ಮಾಜಿ ಸೈನಿಕರು ಸ್ವಯಂ ಪ್ರೇರಿತರಾಗಿ ಪಥ ಸಂಚಲನದಲ್ಲಿ ಹೆಜ್ಜೆ ಹಾಕಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಸಂಭ್ರಮವನ್ನು ಸ್ಮರಣೀಯವಾಗಿಸಿದರು.

ಈ ತಂಡದಲ್ಲಿ ಆರು ಮಂದಿ 60 ವರ್ಷ ಮೀರಿದ ಮಾಜಿ ಸೈನಿಕರು ಇದ್ದರೆ, ಐದು ವರ್ಷಗಳ ಹಿಂದೆ ಸೇನೆಯಿಂದ ನಿವೃತ್ತಿ ಹೊಂದಿದವರೂ ಇದ್ದರು.

ADVERTISEMENT

'ಈ ಬಾರಿಯ ಸ್ವಾತಂತ್ರೋತ್ಸವದಲ್ಲಿ ನಾವೂ ಪಥ ಸಂಚಲನದಲ್ಲಿ ಪಾಲ್ಗೊಳ್ಳುತ್ತೇವೆ ಎಂದು ಮಾಜಿ ಸೈನಿಕರು ಕೋರಿದಾಗ ಜಿಲ್ಲಾಡಳಿತದೊಂದಿಗೆ ಮಾತನಾಡಿ ಅನುಮತಿ ಕೊಡಿಸಿದೆವು. ಸಮವಸ್ತ್ರ ಸೇರಿದಂತೆ ಪಥಸಂಚಲನಕ್ಕೆ ಅಗತ್ಯವಿರುವ ಎಲ್ಲ ಪರಿಕರಗಳನ್ನು ಅವರೇ ಖರೀದಿಸಿ ತಂದಿದ್ದಾರೆ. ಕಳೆದ ಐದು ದಿನಗಳಿಂದ ಪೊಲೀಸರು ಸೇರಿದಂತೆ ಬೇರೆ ಬೇರೆ ತಂಡಗಳೊಂದಿಗೆ ಸೇರಿ ಪಥ ಸಂಚಲನದ ಅಭ್ಯಾಸ (ರಿಹರ್ಸಲ್) ಮಾಡಿದ್ದಾರೆ' ಎಂದು ಬಾಗಲಕೋಟೆ ಸೈನಿಕ ಕಲ್ಯಾಣ ಮಂಡಳಿ ಉಪನಿರ್ದೇಶಕ ಶಿವರಾಜ ಪಾಟೀಲ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.