
ಬಾಗಲಕೋಟೆ: ಯುವ ಜನಾಂಗಕ್ಕೆ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಭಾರತೀಯ ಸಂವಿಧಾನದ ಅರಿವು ಅಗತ್ಯವಾಗಿದೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.
ನಗರದ ಶಿವಾನಂದ ಜೀನ್ ನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಭಾರತೀಯ ಜನತಾ ಪಕ್ಷ ಬಾಗಲಕೋಟೆ ಮತಕ್ಷೇತ್ರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಎಲ್ಲರಿಗೂ ಸಮಪಾಲು, ಸಮಬಾಳು ಎಂಬ ಬಸವಣ್ಣನವರ ವಾಣಿಯಂತೆ ದೇಶಕ್ಕೆ ಅಗತ್ಯವಿರುವ ಸಂವಿಧಾನವನ್ನು ನೀಡುವ ಮೂಲಕ ಸಾಮಾಜಿಕ ವ್ಯವಸ್ಥೆಯಲ್ಲಿ ಬದಲಾವಣೆ ತಂದ ಡಾ.ಅಂಬೇಡ್ಕರ್ ಕುರಿತು ಇಂದಿನ ಯುವ ಜನಾಂಗ ತಿಳಿದುಕೊಳ್ಳುವುದು ಅಗತ್ಯವಾಗಿದೆ. ಅಂಬೇಡ್ಕರ್ ಕೊಡುಗೆಯನ್ನು ಸ್ಮರಿಸಬೇಕಿದೆ ಎಂದು ಹೇಳಿದರು.
ಶಿವಾನಂದ ಟವಳಿ ಮಾತನಾಡಿ, ಅಂಬೇಡ್ಕರ್ ಅವರನ್ನು ಅವರ ಜನ್ಮದಿನದಂದು ಮಾತ್ರ ನೆನಯದೇ ಅವರನ್ನು ಸದಾ ಸ್ಮರಿಸಬೇಕಿದೆ ಎಂದರು. ಡಾ.ಎಂ.ಎಸ್.ದಡ್ಡೇನವರ, ಗುಂಡುರಾವ್ ಶಿಂಧೆ, ರಾಜು ನಾಯ್ಕರ, ಸತ್ಯನಾರಾಯಣ ಹೇಮಾದ್ರಿ, ಬಸವರಾಜ ಯಂಕಂಚಿ, ಬಸವರಾಜ ಹುನಗುಂದ, ಉಮೇಶ ಹಂಚಿನಾಳ, ಶ್ರೀಧರ ನಾಗರಬೆಟ್ಟ, ಯಲ್ಲಪ್ಪ ನಾರಾಯಣಿ, ಕೇಶವ ಭಜಂತ್ರಿ, ರಾಮು ಕಟ್ಟಿಮನಿ, ರವಿ ಧಾಮಜಿ, ನಾಗರಾಜ ಕಟ್ಟಿಮನಿ, ಪ್ರದೀಪ ಗೌಡರ, ಚಂದ್ರು ಸರೂರ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.