ADVERTISEMENT

ಜಮಖಂಡಿ | ಏರಗನ್ ತರಬೇತಿ: ಶ್ರೀರಾಮ ಸೇನೆ 27 ಕಾರ್ಯಕರ್ತರ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 11 ಜನವರಿ 2025, 13:52 IST
Last Updated 11 ಜನವರಿ 2025, 13:52 IST

ಜಮಖಂಡಿ: ತಾಲ್ಲೂಕಿನ ಕಾಜೀಬಿಳಗಿ ಗ್ರಾಮದಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಏರಗನ್ ತರಬೇತಿ ನೀಡಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.

ಸಾವಳಗಿ ಪೊಲೀಸ್ ಠಾಣೆಯಲ್ಲಿ ತರಬೇತಿ ಪಡೆದ ಶ್ರೀರಾಮ ಸೇನೆಯ ಕಾರ್ಯಕರ್ತರು ಹಾಗೂ ಆಯೋಜಕರು ಸೇರಿ 27 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಡಿ.24 ರಿಂದ 28ರವರೆಗೆ ಕಾಶಿಲಿಂಗೇಶ್ವರ ದೇವಸ್ಥಾನದಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ‘ಡಿ.29 ರಂದು ನನ್ನ ಜಮೀನಿನಲ್ಲಿ ಅಕ್ರಮವಾಗಿ ಬಂದು ಏರಗನ್ ತರಬೇತಿ ನೀಡಲಾಗಿದೆ ಎಂದು ಜಮೀನಿನ ಮಾಲೀಕ ಶಿವಪ್ಪ ಹೂಗಾರ ದೂರು ನೀಡಿದ್ದಾರೆ. ಜನರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, 2016ರ ಆಯುಧ ನಿಯಮಾವಳಿಗಳನ್ನು ಅನುಸರಿಸದ್ದಕ್ಕೆ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.