ADVERTISEMENT

ಜಮಖಂಡಿ | ಕೊಳಚೆ ನೀರಿನಲ್ಲಿ ತಟ್ಟೆ ತೊಳೆದ ವಿದ್ಯಾರ್ಥಿಗಳು: ಶಿಕ್ಷಕಿ ಅಮಾನತು

​ಪ್ರಜಾವಾಣಿ ವಾರ್ತೆ
Published 30 ಜನವರಿ 2026, 23:47 IST
Last Updated 30 ಜನವರಿ 2026, 23:47 IST
<div class="paragraphs"><p>ಜಮಖಂಡಿ ತಾಲ್ಲೂಕಿನ ಆಲಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಊಟದ ತಟ್ಟೆಗಳನ್ನು ಕೊಳಚೆ ನೀರಿನಲ್ಲಿ ತೊಳೆಯುತ್ತಿರುವುದು</p></div>

ಜಮಖಂಡಿ ತಾಲ್ಲೂಕಿನ ಆಲಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಊಟದ ತಟ್ಟೆಗಳನ್ನು ಕೊಳಚೆ ನೀರಿನಲ್ಲಿ ತೊಳೆಯುತ್ತಿರುವುದು

   

ಜಮಖಂಡಿ (ಬಾಗಲಕೋಟೆ): ತಾಲ್ಲೂಕಿನ ಆಲಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಊಟದ ತಟ್ಟೆಗಳನ್ನು ಕೊಳಚೆ ನೀರಿನಲ್ಲಿ ತೊಳೆಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಚರ್ಚೆಗೆ ಗ್ರಾಸವಾಗಿದೆ.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ.ಮನ್ನಿಕೇರಿ ಮತ್ತು ಬಿಇಒ ಅಶೋಕ ಬಸಣ್ಣವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಪ್ರಭಾರ ಮುಖ್ಯಶಿಕ್ಷಕಿ ನಂದಾ ಕುಲಕರ್ಣಿ ಅವರನ್ನು ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.

ADVERTISEMENT

‘ಶಾಲಾ ಆವರಣದಲ್ಲಿ ಮಕ್ಕಳ ಊಟದ ತಟ್ಟೆಗಳನ್ನು ತೊಳೆಯಲು ಪ್ರತ್ಯೇಕ ವ್ಯವಸ್ಥೆಯಿದೆ. ಆದರೆ, ಕೊಳವೆಬಾವಿ ದುರಸ್ತಿ ಇರುವ ಕಾರಣ ನಲ್ಲಿಯಲ್ಲಿ ನೀರು ಬರುತ್ತಿಲ್ಲ. ಹೀಗಾಗಿ ಶಾಲಾ ಕಾಂಪೌಂಡ್ ಹೊರಗೆ ಹೋಗಿ ಮಕ್ಕಳು ತಟ್ಟೆ ತೊಳೆಯುತ್ತಿರುವುದು ತಪ್ಪು. ಈ ಕುರಿತು ಪಿಡಿಒಗೆ ಬೋರ್‌ವೇಲ್ ದುರಸ್ತಿ ಬಗ್ಗೆ ಮಾಹಿತಿ ನೀಡಲಾಗಿದೆ’ ಎಂದು ಎ.ಸಿ.ಮನ್ನಿಕೇರಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.