
ಜಮಖಂಡಿ: ಕ್ಷೇತ್ರದಲ್ಲಿ ₹ 11 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಜಗದೀಶ ಗುಡಗುಂಟಿ ತಿಳಿಸಿದರು.
ನಗರದ ವಾಣಿ ಪ್ಲಾಟ್‌ನಲ್ಲಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ₹4.56 ಕೋಟಿ, ಸಿದ್ದಾಪುರ ಗ್ರಾಮದಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲಾ ಆವರಣದಲ್ಲಿ ವಸತಿ ಗೃಹ ನಿರ್ಮಾಣಕ್ಕೆ ₹ 4.93 ಕೋಟಿ, ಲೋಕೋಪಯೋಗಿ ಇಲಾಖೆಯಿಂದ ಕಾಗವಾಡ-ಕಲಾದಗಿ ಗಣಿ ಕೂಡುವ ರಸ್ತೆ ಕಾಮಗಾರಿಗೆ ₹ 2.10 ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದರು.
ಅಜಯ ಕಡಪಟ್ಟಿ, ಮಲ್ಲು ದಾನಗೊಂಡ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಾಲ್ಲೂಕು ವಿಸ್ತರಣಾಧಿಕಾರಿ ಸಂತೋಷ ಬಾಡಗಿ, ಈಶ್ವರ ಆದೆಪ್ಪನವರ, ಸಮೀರ ಕಂಗನೊಳ್ಳಿ, ಭೀಮಪ್ಪ ಬಾಳಪ್ಪಗೋಳ, ಗಣೇಶ ಮೆಂಡಿಗೇರಿ, ಶ್ರೀಧರ ಕಂಬಿ, ಗುತ್ತಿಗೆದಾರ ಆರ್.ಎಲ್. ಬಿರಾದಾರ ಪಾಟೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.