ADVERTISEMENT

ನಾಳೆ ಜೆಡಿಎಸ್ ಸದಸ್ಯತ್ವ ನೋಂದಣಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2024, 15:45 IST
Last Updated 24 ಸೆಪ್ಟೆಂಬರ್ 2024, 15:45 IST

ಬಾಗಲಕೋಟೆ: ‘ಜಾತ್ಯತೀತ ಜನತಾ ದಳ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಹನನಂತ ಮಾವಿನಮರದ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸೆ.26ರಂದು ಮದ್ಯಾಹ್ನ 1ಕ್ಕೆ ಕಲಾಭವನದಲ್ಲಿ ನೋಂದಣಿಗೆ ಚಾಲನೆ ಸಿಗಲಿದೆ’ ಎಂದರು.

‘ಶಾಸಕ ಜಿ.ಟಿ. ದೇವೇಗೌಡ, ಸುರೇಶ ಬಾಬು, ವಿಧಾನ ಪರಿಷತ್‌ ಸದಸ್ಯ ಶರವಣ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಪ್ರತಿ ಮತಗಟ್ಟೆಗೆ 15 ಜನರಂತೆ ಸದಸ್ಯರನ್ನಾಗಿ ಮಾಡಲಾಗುವುದು. ಜಿಲ್ಲೆಯಲ್ಲಿ ಒಟ್ಟು 25 ರಿಂದ 30 ಸಾವಿರ ಜನರನ್ನು ಹೊಸ ಸದಸ್ಯರನ್ನಾಗಿ ಮಾಡಲಾಗುವುದು. ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ’ ಎಂದರು.

ADVERTISEMENT

ಸಲೀಂ ಮೋಮಿನ್‌, ಕೃಷ್ಣಾ ಪಾಟೀಲ, ಹುಚ್ಚೇಶ ದದ್ದಣ್ಣವರ, ಭದ್ರಪ್ಪ, ಗೋಪಾಲ ಲಮಾಣಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.