ಬಾಗಲಕೋಟೆ: ಆರೋಗ್ಯಕರ ಸಮಾಜ ನಿರ್ಮಾಣವಾಗಬೇಕಾದರೆ ಯುವ ಸಮುದಾಯವು ಮಾದಕ ದ್ರವ್ಯ ವ್ಯಸನದಿಂದ ಮುಕ್ತರಾಗಬೇಕು. ಅಂದಾಗ ಆರೋಗ್ಯಕರ ದೇಶ ಕಟ್ಟಲು ಸಾಧ್ಯವಾಗುತ್ತದೆ ಎಂದು ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಅರುಣಕುಮಾರ ಗಾಳಿ ಹೇಳಿದರು.
ನವನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಾದಕ ವಸ್ತು ಮುಕ್ತ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞೆ ಬೋಧನೆ ಮಾಡಿ, ಅವರು ಮಾತನಾಡಿದರು
ಮಾನವನ ಆರೋಗ್ಯಕ್ಕೆ ಮಾರಕವಾಗಿರುವಂತಹ ಗಾಂಜಾ, ಅಫೀಮ್ ದಂತಹ ಮಾದಕ ದ್ರವ್ಯಗಳಿಂದ ದೂರವಿರಬೇಕು. ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಮಾದಕ ದ್ರವ್ಯ ಮಾರಾಟ ಕಂಡು ಬಂದರೆ ಪೊಲೀಸರಿಗೆ ತಿಳಿಸಬೇಕು. ಆಗ ಮಾತ್ರ ಮಾದಕ ದ್ರವ್ಯ ವ್ಯಸನ ಮುಕ್ತ ರಾಷ್ಟ್ರ ನಿರ್ಮಾಣ ಸಾಧ್ಯ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.