ಕಲಾದಗಿ: ಕ್ಷೇತ್ರದಲ್ಲಿ ನಡೆಯಲಿರುವ ಪ್ರತಿಯೊಂದು ಕಾಮಗಾರಿಯೂ ಗುಣಮಟ್ಟದಿಂದ ಕೂಡಿರಬೇಕು ಎಂದು ಶಾಸಕ ಜೆ.ಟಿ.ಪಾಟೀಲ ಹೇಳಿದರು.
ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಬೀಳಗಿ ವಿಧಾನಸಭಾ ಮತಕ್ಷೇತ್ರಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ₹6 ಕೋಟಿ ಅನುದಾನ ಮಂಜೂರಾಗಿದೆ. ಕಲಾದಗಿ ಗ್ರಾಮದ ಅಭಿವೃದ್ಧಿ ಕಾಮಗಾರಿಗಳಿಗೆ ₹ 2,15 ಕೋಟಿ ಹಣ ಮಂಜೂರಾಗಿದೆ ಎಂದರು.
ಜಿಲ್ಲಾ ಅಲ್ಪಸಂಖ್ಯಾತ ಅಧಿಕಾರಿ ಶಿವಾನಂದ ಪಟ್ಟಣಶೆಟ್ಟಿ. ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಬಿ. ಸೌದಾಗರ. ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಚ್.ರೋಣ. ಉಪಾಧ್ಯಕ್ಷ ಫಕೀರಪ್ಪ ಮಾದರ. ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಬ್ರಾಹಿಂ ಸೋಲ್ಜರ್ ಉಪಾಧ್ಯಕ್ಷ ಸೈಪುದ್ದೀನ್ ನದಾಫ, ಬಂದೇನವಾಜ್ ಸೌದಾಗರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.