ಕಲಾದಗಿ: ಘಟಪ್ರಭಾ ನದಿಗೆ ಮಂಗಳವಾರ ಅಪಾರ ಪ್ರಮಾಣದಲ್ಲಿ ನೀರು ಹರಿದು ಬಂದಿರುವುದರಿಂದ ಕಲಾದಗಿ ಕಾತರಕಿ ಸಂಪರ್ಕಿಸುವ ರಸ್ತೆ ಮಧ್ಯಾಹ್ನದ ವೇಳೆಗೆ ಕಡಿತಗೊಂಡಿತು.
ನದಿ ಪಾತ್ರದ ರೈತರ ಜಮೀನುಗಳಲ್ಲಿ ಬೆಳೆಗಳು ಜಲಾವೃತವಾಗಿವೆ. ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆಗಿರುವುದರಿಂದ ಸಾರ್ವಜನಿಕರಿಗೆ ಹಾಗೂ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆ ಉಂಟಾಯಿತು. ಮಧ್ಯಾಹ್ನದ ವೇಳೆಗೆ ಅಧಿಕಾರಿಗಳು ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.