ADVERTISEMENT

ಕೂಡಲಸಂಗಮ | ಕಲ್ಯಾಣ ಪರ್ವ ನಾಳೆಯಿಂದ: ಮಾತೆ ಗಂಗಾದೇವಿ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2025, 0:18 IST
Last Updated 9 ಅಕ್ಟೋಬರ್ 2025, 0:18 IST
<div class="paragraphs"><p>ಮಾತೆ ಗಂಗಾದೇವಿ</p></div>

ಮಾತೆ ಗಂಗಾದೇವಿ

   

ಕೂಡಲಸಂಗಮ (ಬಾಗಲಕೋಟೆ ಜಿಲ್ಲೆ): ‘ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ಬಸವಧರ್ಮ ಪೀಠದಿಂದ ಅಕ್ಟೋಬರ್ 10 ರಿಂದ  12ರವರೆಗೆ  24ನೇ ಕಲ್ಯಾಣ ಪರ್ವ ಕಾರ್ಯಕ್ರಮ ನಡೆಯಲಿದೆ. ಸಚಿವ ಶರಣಪ್ರಕಾಶ ಪಾಟೀಲ ಅವರು ಕಾರ್ಯಕ್ರಮ ಉದ್ಘಾಟಿಸುವರು’ ಎಂದು ಕೂಡಲಸಂಗಮ ಬಸವ ಧರ್ಮ ಪೀಠದ ಪೀಠಾಧ್ಯೆಕ್ಷೆ ಮಾತೆ ಗಂಗಾದೇವಿ ಹೇಳಿದರು.

‘ಕಾರ್ಯಕ್ರಮದ ಸಾನ್ನಿಧ್ಯವನ್ನು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ವಹಿಸುವರು. ಮಧ್ಯಾಹ್ನ  ಮಹಿಳಾ ಗೋಷ್ಠಿ ಮತ್ತು ಸಂಜೆ ಶರಣ ವಂದನೆ ಕಾರ್ಯಕ್ರಮ ನಡೆಯಲಿದೆ’ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

‘ಅಕ್ಟೋಬರ್ 11ರಂದು ಶೂನ್ಯ ಪೀಠಾರೋಹಣ ಸಮಾರಂಭ ನಡೆಯಲಿದೆ. ಅಕ್ಟೋಬರ್ 12ರಂದು ಬಸವಣ್ಣನವರ ಭಾವಚಿತ್ರ, ವಚನ ಸಾಹಿತ್ಯ ಮೆರವಣಿಗೆ ಮತ್ತು ಸಮಾರೋಪ ನಡೆಯಲಿದೆ. ವಿವಿಧ ರಾಜ್ಯಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.