ADVERTISEMENT

ಎಸಿಬಿ ದಾಳಿ: ಸದ್ದು ಮಾಡಿದ ನೋಟು ಎಣಿಕೆ ಯಂತ್ರ, ಶ್ರೀಗಂಧದ ತುಂಡು

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2022, 5:51 IST
Last Updated 16 ಮಾರ್ಚ್ 2022, 5:51 IST
ಬಾದಾಮಿ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಮನೆಯಲ್ಲಿ ಪತ್ತೆಯಾಗಿರುವುದು
ಬಾದಾಮಿ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಮನೆಯಲ್ಲಿ ಪತ್ತೆಯಾಗಿರುವುದು   

ಬಾಗಲಕೋಟೆ: ಬಾದಾಮಿ ವಲಯ ಅರಣ್ಯಾಧಿಕಾರಿ ಶಿವಾನಂದ ಖೇಡಗಿ ಅವರ ನಿವಾಸದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಪರಿಶೀಲನೆ ವೇಳೆ ನೋಟು ಎಣಿಸುವ ಯಂತ್ರ ಹಾಗೂ ಶ್ರೀಗಂಧದ ತುಂಡುಗಳು ದೊರೆತಿರುವುದು ಈಗ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಖೇಡಗಿ ಮೂಲತಃ ವಿಜಯಪುರದ ಜಿಲ್ಲೆಯ ಸಿಂಧಗಿಯವರು.ಕಳೆದ ಎರಡು ವರ್ಷಗಳಿಂದ ಬಾದಾಮಿ ವಲಯ ಅರಣ್ಯ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಅದಕ್ಕೂ ಮುನ್ನ ವಿಜಯಪುರ ಹಾಗೂ ಬಾಗಲಕೋಟೆ ಅರಣ್ಯ ವಲಯಗಳಲ್ಲಿ ಕೆಲಸ ಮಾಡಿದ್ದಾರೆ.

ಖೇಡಗಿ ಅರಣ್ಯ ಇಲಾಖೆಯಲ್ಲಿ ಸಹಾಯಕ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ(ಎಆರ್‌ಎಫ್‌ಒ) ಕೆಲಸಕ್ಕೆ ಸೇರಿದ್ದರು. 32 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಅವರು ಇದೇ ಜೂನ್‌ ಅಂತ್ಯಕ್ಕೆ ನಿವೃತ್ತಿ ಆಗಲಿದ್ದಾರೆ ಎಂದು ತಿಳಿದುಬಂದಿದೆ.

ADVERTISEMENT

ಬಾಗಲಕೋಟೆಯ ನವನಗರದ ಸೆಕ್ಟರ್ ನಂ 15 ರಲ್ಲಿರುವ ಅವರ ನಿವಾಸ, ಇಬ್ಬರು ಅಳಿಯಂದಿರ ಮನೆ, ಅಂಗಡಿ, ಬಾದಾಮಿಯ ಕಚೇರಿಯ ಮೇಲೆ ಏಕಕಾಲದಲ್ಲಿ ಎಸಿಬಿ ಡಿವೈಎಸ್ಪಿ ಸುರೇಶ ರೆಡ್ಡಿ ನೇತೃತ್ವದ ತಂಡ ಬುಧವಾರ ನಸುಕಿನಲ್ಲಿ ದಾಳಿ ನಡೆಸಿದೆ.

ಎಸಿಎಫ್ ಹುದ್ದೆ ನಿರಾಕರಣೆ: ಶಿವಾನಂದ ಖೇಡಗಿ ಅವರಿಗೆ ವರ್ಷದ ಹಿಂದೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಹುದ್ದೆಗೆ ಬಡ್ತಿ ದೊರಕಿತ್ತು. ಬಹುತೇಕ ಸೇವೆ ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಮಾಡಿರುವ ಅವರು, ಎಸಿಎಫ್ ಆದಲ್ಲಿ ಬೇರೆ ಕಡೆಗೆ ತೆರಳಬೇಕಾಗುತ್ತದೆ ಎಂದು ಬಡ್ತಿ ನಿರಾಕರಿಸಿ ಬರೆದುಕೊಟ್ಟಿದ್ದರು ಎಂದು ತಿಳಿದುಬಂದಿದೆ.

ಮನೆಯಲ್ಲಿ 3.17 ಕೆ.ಜಿವರೆಗೆ ಶ್ರೀಗಂಧ ಇಟ್ಟುಕೊಳ್ಳಬಹುದಾಗಿದೆ. ಖೇಡಗಿ ಅವರ ನಿವಾಸದಲ್ಲಿ 3 ಕೆ.ಜಿ ಶ್ರೀಗಂಧ ದೊರೆತಿದೆ ಎಂದು ಹೇಳಲಾಗಿದೆ. ಆದರೆ ಅದನ್ನು ಅಧಿಕೃತ ಸಂಸ್ಥೆಯಿಂದ ಖರೀದಿಸಿದ ಬಗ್ಗೆ ರಸೀದಿ ಇಟ್ಟುಕೊಂಡಿರಬೇಕು. ಇಲ್ಲದಿದ್ದರೆ ಅರಣ್ಯ ಸರಂಕ್ಷಣೆ ಕಾಯ್ದೆಯಡಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗುತ್ತದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು 'ಪ್ರಜಾವಾಣಿ' ಗೆ ತಿಳಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.