ಬಾಗಲಕೋಟೆ: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮಂಗಳವಾರ ಬೆಳಿಗ್ಗೆಯಿಂದ ಮುಷ್ಕರ ಆರಂಭಿಸಿದ್ದಾರೆ. ಪ್ರಯಾಕ್ಕೆ ಬಸ್‌ಗಳಿಲ್ಲದೆ ಪ್ರಯಾಣಿಕರು ಪರದಾಡುತ್ತಿದ್ದಾರೆ.
ಶಾಲೆ, ಕಾಲೇಜು, ಕೆಲಸ ನಿರ್ವಹಿಸಲು ಹೊರಟಿದ್ದ ನೌಕರರು ಬಸ್‌ಗಾಗಿ ನಿಲ್ದಾಣದಲ್ಲಿ ಕಾಯ್ದು ಕುಳಿತಿದ್ದರು.
ಮದುವೆ, ದೇವರಿಗೆ ಹೊರಟಿದ್ದ ಜನರೂ ಬಸ್‌ಗಳಿಲ್ಲದಿರುವುದರಿಂದ ಬೇಜಾರು ಮಾಡಿಕೊಂಡು ಮನೆಗಳತ್ತ ಹೊರಟರು.
ಜಿಲ್ಲಾಡಳಿತ ಪರ್ಯಾಯ ವ್ಯವಸ್ಥೆ ಮಾಡದ ಕಾರಣ ಸಂಚಾರಕ್ಕೆ ಯಾವುದೇ ವ್ಯವಸ್ಥೆ ಇಲ್ಲದಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.