
ಪ್ರಜಾವಾಣಿ ವಾರ್ತೆ
ಅರ್ಜಿ ಆಹ್ವಾನ
ಬಾಗಲಕೋಟೆ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮಾಜಿ ದೇವದಾಸಿ ಪುನರ್ವಸತಿ, ಚೇತನ ಮತ್ತು ಉದ್ಯೋಗಿನಿ ಹಾಗೂ ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನ.15 ರಿಂದ ಡಿ.15ರವರೆಗೆ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. 2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳದವರು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಮಾಹಿತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪ ನಿದೇರ್ಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.