ADVERTISEMENT

ಬಾಗಲಕೋಟೆ: ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2023, 8:30 IST
Last Updated 15 ಸೆಪ್ಟೆಂಬರ್ 2023, 8:30 IST
   

ಬಾಗಲಕೋಟೆ: ತಮಿಳುನಾಡಿಗೆ ಕಾವೇರಿ ನೀರು ಬಿಡದಿರುವ ಗಟ್ಟಿ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಪ್ರತಿಭಟನೆ ಮಾಡಿದರು.

ರಾಜ್ಯದಲ್ಲಿ ಬರ ಆವರಿಸಿದೆ. ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ಇದೆ. ಕೆಆರ್ ಎಸ್ ಜಲಾಶಯದಲ್ಲಿ ನೀರಿಲ್ಲ. ಸರ್ಕಾರ ರಾಜ್ಯದ ರೈತರ ಹಿತ ಕಾಯಬೇಕು ಎಂದು ಆಗ್ರಹಿಸಿದರು.

ರಾಜ್ಯದ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಆಗ್ರಹಿಸಿದ‌ ಅವರು, ಸಂಸದರ ವಿರುದ್ಧ ಘೋಷಣೆ ಕೂಗಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.