ADVERTISEMENT

ಕೆರೂರ | ನಿರಂತರ ಮಳೆ: 30 ಮನೆಗಳು ಕುಸಿತ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 3:18 IST
Last Updated 28 ಸೆಪ್ಟೆಂಬರ್ 2025, 3:18 IST
ಕೆರೂರ ಪಟ್ಟಣದಲ್ಲಿ ಶುಕ್ರವಾರ ನಿರಂತರವಾಗಿ ಸುರಿದ ಮಳೆಗೆ ಹೊಸಪೇಟೆ ಬಡಾವಣೆಯ ಮನೆಯೊಂದು ಕುಸಿದು ಬಿದ್ದಿದೆ
ಕೆರೂರ ಪಟ್ಟಣದಲ್ಲಿ ಶುಕ್ರವಾರ ನಿರಂತರವಾಗಿ ಸುರಿದ ಮಳೆಗೆ ಹೊಸಪೇಟೆ ಬಡಾವಣೆಯ ಮನೆಯೊಂದು ಕುಸಿದು ಬಿದ್ದಿದೆ   

ಕೆರೂರ: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಟ್ಟಣದಲ್ಲಿ 30 ಮನೆಗಳು ಭಾಗಶಃ ಕುಸಿದಿವೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಪಟ್ಟಣದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ನೂರಾರು ಮನೆಗಳು ಸೊರುತ್ತಿವೆ. ಜನರು ಮನೆಯಿಂದ ಹೊರಗೆ ಬಾರದಂತಹ‌ ಸ್ಥಿತಿ ನಿರ್ಮಾಣವಾಗಿದೆ. 

ಪಟ್ಟಣದಲ್ಲಿ ಅಷ್ಟೇ ಅಲ್ಲದೇ ಸುತ್ತಮುತ್ತಲಿನ ಕೆಲವೊಂದು ಗ್ರಾಮೀಣ ಪ್ರದೇಶಗಳಲ್ಲಿ ಮಳೆ‌ಗೆ ಮನೆಗಳು ಹಾನಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಹಾನಿ ಪ್ರದೇಶಗಳಿಗೆ‌ ಶನಿವಾರ ಕಂದಾಯ‌ ಇಲಾಖೆ ಅಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.