ಬಾಗಲಕೋಟೆ: ಕಿತ್ತೂರ ಉತ್ಸವ-2024ರ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಕಿತ್ತೂರು ಜ್ಯೋತಿ ರಥಯಾತ್ರೆ ಮಂಗಳವಾರ ಬಾಗಲಕೋಟೆಗೆ ಆಗಮಿಸಿದಾಗ ಜಿಲ್ಲಾಡಳಿತದಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಜಿಲ್ಲಾಡಳಿತ ಭವನಕ್ಕೆ ರಥಯಾತ್ರೆ ಆಗಮಿಸುತ್ತಿದ್ದಂತೆ ವಿವಿಧ ಜಾನಪದ ಕಲಾತಂಡಗಳಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ಕಿತ್ತೂರು ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಜ್ಯೋತಿ ಬೆಳೆಗಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ತಹಶೀಲ್ದಾರ ಅಮರೇಶ ಪಮ್ಮಾರ, ಸಮುದಾಯದ ಮುಖಂಡರಾದ ರವಿ ಪಟ್ಟಣದ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜ ಬಾಂಧವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.