ADVERTISEMENT

ಕೃಷ್ಣಾ ಮೇಲ್ದಂಡೆ ಯೋಜನೆ | ಸರ್ಕಾರ ನಿಲುವು ಸ್ಪಷ್ಟಪಡಿಸಲಿ: ರವಿ ಕುಮಟಗಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2025, 23:00 IST
Last Updated 2 ಸೆಪ್ಟೆಂಬರ್ 2025, 23:00 IST
<div class="paragraphs"><p>ಕೃಷ್ಣಾ ಮೇಲ್ದಂಡೆ ಯೋಜನೆ</p></div>

ಕೃಷ್ಣಾ ಮೇಲ್ದಂಡೆ ಯೋಜನೆ

   

ಬಾಗಲಕೋಟೆ: ‘ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಕುರಿತು ಬೆಂಗಳೂರಿನಲ್ಲಿ ಬುಧವಾರ ನಡೆಯುವ ಸರ್ಕಾರ ಸ್ಪಷ್ಟ ತೀರ್ಮಾನ ಕೈಗೊಳ್ಳಬೇಕು’ ಎಂದು ಬಾಗಲಕೋಟೆ ರೈತರ ಹಕ್ಕುಗಳ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ರವಿ ಕುಮಟಗಿ ಆಗ್ರಹಿಸಿದರು.

‘ಯೋಜನೆ ಆರಂಭ ಆದಂದಿನಿಂದ ಅಧಿಕಾರದಲ್ಲಿದ್ದ ಎಲ್ಲ ಪಕ್ಷಗಳ ಸರ್ಕಾರಗಳೂ ನಿರ್ಲಕ್ಷ್ಯ ವಹಿಸಿವೆ. ಯೋಜನೆ ಅಪೂರ್ಣವಾಗಿದೆ. ವೆಚ್ಚ ಹೆಚ್ಚುತ್ತಿದೆ. ಸಂತ್ರಸ್ತರಿಗೆ ಸೂಕ್ತ ಪರಿಹಾರ, ಪುನರ್ವಸತಿ ಸಿಕ್ಕಿಲ್ಲ’ ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

‘ಸಂತ್ರಸ್ತರಿಗೆ ಭೂಮಿ ಪರಿಹಾರ ಕೊಡಲು ₹ 2 ಲಕ್ಷ ಕೋಟಿ ಕೊಡಲಾಗದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದು ಸೂಕ್ತವಲ್ಲ. ಸಂತ್ರಸ್ತರಿಗೆ ಸೂಕ್ತ ಪರಿಹಾರ, ಪುನರ್ವಸತಿ ಕಲ್ಪಿಸುವುದು ಸರ್ಕಾರದ ಕೆಲಸವಲ್ಲವೇ’ ಎಂದು ಪ್ರಶ್ನಿಸಿದರು.

ವಕೀಲ ಡಿ.ಬಿ. ಪೂಜಾರಿ ಮಾತನಾಡಿ, ‘ಪರಿಹಾರ ನೀಡುವ ಸಂಬಂಧ ಶಿವಕುಮಾರ್ ಅವರ ಹೇಳಿಕೆ ಖಂಡಿಸಿ, ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು. ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.