ಬಾಗಲಕೋಟೆ: ಮುಧೋಳ ತಾಲ್ಲೂಕಿನ ಶಿರೋಳ ಗ್ರಾಮದ ಬಳಿ ಶುಕ್ರವಾರ ಬೆಳಗಿನ ಜಾವ ವಾಯವ್ಯ ಕರ್ನಾಟಕ ರಸ್ತೆ ಸಂಸ್ಥೆ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜಮಖಂಡಿ ತಾಲ್ಲೂಕಿನ ಗೋಠೆ ಹಾಗೂ ಕಾಜಿ ಬೀಳಗಿ ಗ್ರಾಮದ ಹಣಮಂತ (21), ರಿಯಾಜ್ (25), ಬಾಲಪ್ಪ (34) ಹಾಗೂ ಸಿದ್ದರಾಯ (34) ಮೃತಪಟ್ಟವರು. ಎಲ್ಲರೂ ಕಾಜಿ ಬೀಳಗಿಯಿಂದ ಧಾರವಾಡಕ್ಕೆ ಹೊರಟಿದ್ದರು. ಬಸ್ ಬೆಳಗಾವಿಯಿಂದ ಮುಧೋಳ ಮಾರ್ಗವಾಗಿ ಕಲಬುರ್ಗಿಗೆ ಹೊರಟಿತ್ತು.
ಕಬ್ಬುಸಾಗಣೆ ಟ್ರ್ಯಾಕ್ಟರ್ ಹಿಂದಿಕ್ಕುವ ಭರದಲ್ಲಿ ಕಾರು ಎದುರಿಗೆ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿತ್ತು. ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.