ADVERTISEMENT

ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2025, 14:21 IST
Last Updated 9 ಜನವರಿ 2025, 14:21 IST
ಹುನ್ನೂರು ಗ್ರಾಮದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ಗುರುವಂದನೆ, ಸ್ನೇಹ ಸಮ್ಮಿಲನ, ವಿಜ್ಞಾನ ಪ್ರಯೋಗಾಲಯ ಉದ್ಘಾಟನೆಯನ್ನು ಗಣ್ಯರು ನೆರವೇರಿಸಿದರು
ಹುನ್ನೂರು ಗ್ರಾಮದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ಗುರುವಂದನೆ, ಸ್ನೇಹ ಸಮ್ಮಿಲನ, ವಿಜ್ಞಾನ ಪ್ರಯೋಗಾಲಯ ಉದ್ಘಾಟನೆಯನ್ನು ಗಣ್ಯರು ನೆರವೇರಿಸಿದರು   

ಜಮಖಂಡಿ: ಹುನ್ನೂರಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವವನ್ನು 2026ರಲ್ಲಿ ಆಚರಿಸಲಾಗುವುದು ಎಂದು ಶಾಲೆಯ ಹಳೇ ವಿದ್ಯಾರ್ಥಿ ವಿಶ್ವನಾಥ ಶಾಸ್ತ್ರೀ ಹೇಳಿದರು.

ತಾಲ್ಲೂಕಿನ ಹುನ್ನೂರು ಗ್ರಾಮದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ 2003-04 ನೇ ಸಾಲಿನಲ್ಲಿ 7 ನೇ ತರಗತಿ ಪೂರೈಸಿದ ಹಳೇ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಗುರುವಂದನೆ, ಸ್ನೇಹ ಸಮ್ಮಿಲನ, ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಹುನ್ನೂರಿನ ಶಾಲೆ ಈಗಾಗಲೇ ಶತಮಾನ ಪೂರೈಸಿದೆ. ನಾಲ್ಕೈದು ವರ್ಷಗಳ ಹಿಂದೆ ಶತಮಾನೋತ್ಸವ ಆಚರಿಸಲು ತೀರ್ಮಾನ ಕೈಗೊಂಡಿದ್ದರು. ಶಾಲೆ ಆವರಣದಲ್ಲಿ ಹೊಸ ಕಟ್ಟಡ ನಿರ್ಮಾಣ, ಮತ್ತಿತರ ಕಾರಣಕ್ಕಾಗಿ ಶತಮಾನೋತ್ಸವ ಆಚರಣೆಗೆ ಹಿನ್ನಡೆಯಾಗಿದೆ. 2026ರಲ್ಲಿ ಹಮ್ಮಿಕೊಳ್ಳಲಾಗುವ ಶತಮಾನೋತ್ಸವ ಸಮಾರಂಭಕ್ಕೆ ಹಳೇ ವಿದ್ಯಾರ್ಥಿಗಳೆಲ್ಲರೂ ಕೈಜೋಡಿಸಿ ಯಶಸ್ವಿಗೊಳಿಸಬೇಕು ಎಂದರು.

ADVERTISEMENT

ಉಪನ್ಯಾಸಕ ಲಿಂಗಾನಂದ ಗವಿಮಠ ಇಲ್ಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಂಸ್ಕಾರವನ್ನೂ ಪಡೆದಿದ್ದಾರೆ ಎನ್ನುವುದಕ್ಕೆ ಹಳೇ ವಿದ್ಯಾರ್ಥಿಗಳು ಹಮ್ಮಿಕೊಂಡಿರುವ ಗುರುವಂದನೆ ಕಾರ್ಯಕ್ರಮವೇ ಸಾಕ್ಷಿ. ಸರ್ಕಾರಿ ಶಾಲೆಗೊಂದು ಸುಸಜ್ಜಿತ ಪ್ರಯೋಗಾಲಯದ ಕೊಡುಗೆ ನೀಡಿರುವ ಹಳೇ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯ ಎಂದರು.

ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಣ ಪಡೆದ ಬಳಿಕ 17 ವರ್ಷದ ನಂತರ ಗುರುವಂದನೆ ಮತ್ತು ಸ್ನೇಹಸಮ್ಮಿಲನ ನೆಪದಲ್ಲಿ ಒಂದೆಡೆ ಸೇರಿದ ಹಳೇ ವಿದ್ಯಾರ್ಥಿಗಳೆಲ್ಲರೂ ಶಾಲೆ ದಿನಗಳನ್ನು ಮೆಲುಕು ಹಾಕಿ ಸಂಭ್ರಮಿಸಿದರು. ತಮಗೆ ಕಲಿಸಿದ ಗುರುಗಳಿಗೆ ಸಸಿ ನೀಡಿ ಸತ್ಕರಿಸಿ ಗೌರವ ಸಲ್ಲಿಸಿದರು. ವೈಯಕ್ತಿಕವಾಗಿ ಹಣ ಸಂಗ್ರಹಿಸಿ ತಾವು ಕಲಿತ ಶಾಲೆಗೆ ಅಂದಾಜು ₹ 1.80 ಲಕ್ಷ ವೆಚ್ಚದಲ್ಲಿ ವಿಜ್ಞಾನ ಪ್ರಯೋಗಾಲಯದ ವ್ಯವಸ್ಥೆ ಕಲ್ಪಿಸಿದ್ದಾರೆ.

ಎಸ್‌ಡಿಎಂಸಿ ಅಧ್ಯಕ್ಷ ಹನುಮಂತ ಜಕ್ಕನ್ನವರ, ಶ್ರೀಶೈಲ ಔರಸಂಗ, ಶ್ರೀಶೈಲ ಬಿಳ್ಳೂರ ರಂಗಪ್ಪ ಮುನ್ನೊಳ್ಳಿ, ಪಂಡಿತಪ್ಪ ಯಲ್ಲಟ್ಟಿ, ಎಸ್.ಎಂ. ಅಂಬಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.