ADVERTISEMENT

ಲಕ್ಷ್ಮೀ ದೇವಿ ಪಲ್ಲಕ್ಕಿ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2022, 5:48 IST
Last Updated 20 ಫೆಬ್ರುವರಿ 2022, 5:48 IST
ಕಲಾದಗಿ ಸಮೀಪದ ಅಂಕಲಗಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಪಲ್ಲಕ್ಕಿ ಮೆರವಣಿಗೆ ನಡೆಯಿತು
ಕಲಾದಗಿ ಸಮೀಪದ ಅಂಕಲಗಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಪಲ್ಲಕ್ಕಿ ಮೆರವಣಿಗೆ ನಡೆಯಿತು   

ಕಲಾದಗಿ: ಸಮೀಪದ ಅಂಕಲಗಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ ಶನಿವಾರ ಸಂಭ್ರಮದಿಂದ ಜರುಗಿತು.

ಬೆಳಿಗ್ಗೆಯಿಂದಲೇ ಲಕ್ಷ್ಮಿ ದೇವಿಗೆ ವಿಶೇಷ ಪೂಜೆ, ಅಭಿಷೇಕ ಮತ್ತು ಕುಂಕುಮಾರ್ಚನೆ, ವಿಶೇಷ ಪೂಜಾ ಕೈಂಕರ್ಯ ಹಾಗೂ ಹೋಮ ಹವನ ಜರುಗಿದವು. ನಂತರ ಲಕ್ಷ್ಮಿ ದೇವಿಯ ಪಲ್ಲಕ್ಕಿ ಉತ್ಸವದ ಮೆರವಣಿಗೆಯು ದೇವಸ್ಥಾನದಿಂದ ಆರಂಭಗೊಂಡು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ದೇವಸ್ಥಾನಕ್ಕೆ ಬಂದು ತಲುಪಿತು.

ಪಲ್ಲಕ್ಕಿ ಉತ್ಸವದ ಮೆರವಣಿಗೆ ಯುದ್ದಕ್ಕೂ ಭಂಡಾರ ಎರಚಿ ಲಕ್ಷ್ಮೀ ದೇವಿಗೆ ಜೈಕಾರ ಹಾಕುತ್ತಾ ಭಕ್ತಸಮೂಹ ಭಂಡಾರದಲ್ಲಿ ಮಿಂದೆದ್ದಿತು. ಈ ವೇಳೆ ಚೌಡಕಿ ಪದ, ಹಲಗಿ ಮೇಳ, ಡೊಳ್ಳು ಕುಣಿತ, ನವಿಲು ಕುಣಿತ ಹಾಗೂ ಕುದುರೆ ಕುಣಿತ ನೋಡುಗರ ಗಮನ ಸೆಳೆದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.