ADVERTISEMENT

ಅವಹೇಳನಕಾರಿ ಹೇಳಿಕೆ: ಡಿ.ಕೆ.ಶಿವಕುಮಾರ್ ಕ್ಷಮೆಗೆ ವಕೀಲರ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 22:04 IST
Last Updated 9 ಸೆಪ್ಟೆಂಬರ್ 2025, 22:04 IST
<div class="paragraphs"><p>ಡಿ.ಕೆ.ಶಿವಕುಮಾರ್</p></div>

ಡಿ.ಕೆ.ಶಿವಕುಮಾರ್

   

ಬಾಗಲಕೋಟೆ: ವಕೀಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ವಕೀಲರ ಸಂಘದ ಸದಸ್ಯರು ಮಂಗಳವಾರ ಕಲಾಪದಿಂದ ದೂರ ಉಳಿದರು.

ಸಂಘದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ಮಾಡಿದ ಅವರು, ಶಿವಕುಮಾರ್ ಅವರನ್ನು ಸಂಪುಟದಿಂದ ವಜಾಗೊಳಿಸಲು ಹಾಗೂ ಕಾನೂನು ಕ್ರಮಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು ಎಂದು ರಾಜ್ಯಪಾಲರಿಗೆ, ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.

ADVERTISEMENT

‘ವಕೀಲರು ರೈತರನ್ನು ತಪ್ಪು ದಾರಿಗೆ ಎಳೆಯಲು ಪ್ರಯತ್ನಿಸುತ್ತಿದ್ದಾರೆ’ ಎಂದು ಬಾಗಿನ ಅರ್ಪಣೆ ವೇಳೆ ಆಲಮಟ್ಟಿ ಜಲಾಶಯಕ್ಕೆ ಬಂದಾಗ ಶಿವಕುಮಾರ್ ಹೇಳಿದ್ದಾರೆ. ಇದರಿಂದ ವಕೀಲರ ಗೌರವಕ್ಕೆ ಧಕ್ಕೆಯಾಗಿದೆ. ಕ್ಷಮೆ ಕೇಳುವವರೆಗೆ ನಿತ್ಯ ಬೆಳಿಗ್ಗೆ 10.30 ರಿಂದ ಒಂದು ಗಂಟೆ ಕಾಲ ಪ್ರತಿಭಟನೆ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಬಸವರಾಜ ಗದ್ದಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.