
ಬೀಳಗಿ: ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಮಕ್ಕಳ ಕಲಿಕಾ ಮಟ್ಟವನ್ನು ಉತ್ತೇಜಿಸಲು ಹಾಗೂ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಪ್ರೋತ್ಸಾಹಿಸಿ ಮುಖ್ಯ ವಾಹಿನಿಗೆ ತರಲು ಈ ಕಲಿಕಾ ಹಬ್ಬ ಪ್ರೇರಕವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ ಹೇಳಿದರು.
ತಾಲ್ಲೂಕಿನ ಇನಾಂ ಹಂಚಿನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ತೆಗ್ಗಿ ಕ್ಲಸ್ಟರ್ ಮಟ್ಟದ ಮಕ್ಕಳ ಕಲಿಕಾ ಹಬ್ಬದ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮಕ್ಕಳ ಗ್ರಹಿಕಾ ಸಾಮರ್ಥ್ಯ ಹೆಚ್ಚಾಗಿದ್ದು. ಆ ವೇಗಕ್ಕೆ ಶಿಕ್ಷಕರು ಆಗು ಹೋಗುಗಳನ್ನು ತಿಳಿಯಬೇಕು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಂಡು ಮಗುವಿನ ಜ್ಞಾನವನ್ನು ವೃದ್ಧಿಸಿ ಸ್ಪರ್ಧಾತ್ಮಕ ಜಗತ್ತಿಗೆ ಹೊಂದಿಕೊಳ್ಳುವ ರೀತಿಯಲ್ಲಿ ಅಡಿಪಾಯ ಹಾಕಬೇಕು ಎಂದರು.
ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಸಪ್ಪ ಅಪ್ಪಣ್ಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಗ್ರಾಮ ಪಂಚಾಯತಿ ಅಧ್ಯಕ್ಷೆ ಸಾವಿತ್ರಿ ಬಡಿಗೇರ,ಮುತ್ತಪ್ಪ ಗಾಣಿಗೇರ, ತಾಲ್ಲೂಕು ಕಲಿಕಾ ಹಬ್ಬದ ನೋಡಲ್ ಅಧಿಕಾರಿ ಬಸವರಾಜ ರಾಠೋಡ, ತೆಗ್ಗಿ ಕ್ಲಸ್ಟರ್ ನೋಡಲ ಅಧಿಕಾರಿ ಎನ್. ಎಸ್. ಪಾಟೀಲ, ಸಿಆರ್‌ಪಿ ಬಿ .ಎಸ್. ಕಠಾಣಿ, ಮುಖ್ಯಶಿಕ್ಷಕ ಎಸ್.ಎಂ. ಏಳುಮಳದವರ, ಗ್ರಾಮ ಪಂಚಾಯತ ಸದಸ್ಯರು ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಭಾಗವಹಿಸಿದ್ದರು.
ಶಿಕ್ಷಕರಾದ ಆರ್. ಪಿ. ಪಾಟೀಲ ನಿರೂಪಿಸಿದರು. ಸ್ಥಳೀಯ ಸಿ ಆರ್ ಪಿ ಎಂ.ಎಲ್. ಅತಾಲಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಕಾಶ ರಾಠೋಡ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.