ADVERTISEMENT

ಪಂಚಾಯ್ತಿ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 31 ಜನವರಿ 2025, 3:55 IST
Last Updated 31 ಜನವರಿ 2025, 3:55 IST
<div class="paragraphs"><p>ನರಸಿಂಹರಾವ್ ಗುಜ್ಜಾರ,&nbsp;ಎಸ್‌.ಪಿ. ಹಿರೇಮಠ</p></div>

ನರಸಿಂಹರಾವ್ ಗುಜ್ಜಾರ, ಎಸ್‌.ಪಿ. ಹಿರೇಮಠ

   

ಬಾಗಲಕೋಟೆ: ಆದಾಯ ಮೀರಿ ಆಸ್ತಿ ಹೊಂದಿದ ಆರೋಪದಡಿ ಬಾದಾಮಿ ತಾಲ್ಲೂಕಿನ ಹೊಲಗೇರಿ ಗ್ರಾಮ ಪಂಚಾಯಿತಿಯ ಪಿಡಿಒ ಎಸ್‌.ಪಿ. ಹಿರೇಮಠ ಮನೆ ಮೇಲೆ ಶುಕ್ರವಾರ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ನವನಗರದ ವಿದ್ಯಾಗಿರಿಯ 22ನೇ‌ ಅಡ್ಡರಸ್ತೆಯಲ್ಲಿ ಹಿರೇಮಠ ಅವರ ಮನೆ ಇದೆ. ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳಿಗ್ಗೆ ಮನೆ ಮೇಲೆ ದಾಳಿ ನಡೆಸಿದ್ದಾರೆ.

ADVERTISEMENT

ಹೂಲಗೇರಿ ಗ್ರಾಮ ಪಂಚಾಯಿತಿ ಕಚೇರಿಯಲ್ಲೂ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ. ಜೊತೆಗೆ ಗದಗ ಜಿಲ್ಲೆಯ ನರಗುಂದ ಮನೆ ಮೇಲೂ ದಾಳಿ ನಡೆಸಿದ್ದಾರೆ.

ರಾಯಚೂರು ಜಿಲ್ಲಾ ಪಂಚಾಯಿತಿಯ ಸಹಾಯಕ ಲೆಕ್ಕಾಧಿಕಾರಿ ಮನೆ ಮೇಲೆ ದಾಳಿ

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ಲೋಕಾಯುಕ್ತರು ಬೆಳ್ಳಂಬೆಳಿಗ್ಗೆ ಜಿಲ್ಲಾ ಪಂಚಾಯಿತಿಯ ಸಹಾಯಕ ಲೆಕ್ಕಾಧಿಕಾರಿ ನರಸಿಂಹರಾವ್ ಗುಜ್ಜಾರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ನಗರದ ದೇವರ ಕಾಲೊನಿಯಲ್ಲಿರುವ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಸಿದ್ದರಾಜು ಮತ್ತು ಡಿವೈಎಸ್ಪಿ ಶೈಲಜಾ ನೇತೃತ್ವದ ತಂಡ ಬ್ಯಾಂಕ್ ದಾಖಲೆಗಳು, ಆಸ್ತಿ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

ನರಸಿಂಹರಾವ್ ಗುಜ್ಜಾರ ಬೆಂಗಳೂರಿಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.