ADVERTISEMENT

ರಾಜ್ಯದ ಎಲ್ಲ ಶಾಸಕರ ಮನೆ ಮುಂದೆ ಜೂನ್‌ 8ರಂದು ಧರಣಿ: ಶ್ರೀರಾಮಸೇನೆ

ಧ್ವನಿವರ್ಧಕಗಳನ್ನು ತೆಗೆಯಲು ಕ್ರಮಕೈಗೊಳ್ಳದ ರಾಜ್ಯ ಸರ್ಕಾರದ ನೀತಿಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2022, 15:43 IST
Last Updated 2 ಜೂನ್ 2022, 15:43 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬಾಗಲಕೋಟೆ: ಶಬ್ದ ಮಾಲಿನ್ಯ ಉಂಟು ಮಾಡುತ್ತಿರುವ ಧ್ವನಿವರ್ಧಕಗಳನ್ನು ತೆಗೆಯಲು ಕ್ರಮಕೈಗೊಳ್ಳದ ರಾಜ್ಯ ಸರ್ಕಾರದ ನೀತಿ ಖಂಡಿಸಿ ಜೂನ್‌ 8 ರಂದು ರಾಜ್ಯದ ಎಲ್ಲ ಶಾಸಕರ ಮನೆ ಮುಂದೆ ಧರಣಿ ಮಾಡಲಾಗುವುದು ಎಂದು ಶ್ರೀರಾಮಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಾಲಿಂಗಣ್ಣ ಗುಂಜಗಾವಿ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಧಿಕೃತ ಧ್ವನಿವರ್ಧಕಗಳನ್ನು ಹದಿನೈದು ದಿನಗಳೊಳಗೆ ಅನುಮತಿ ಪಡೆದುಕೊಳ್ಳಬೇಕು ಎಂದು ಸರ್ಕಾರ ಹೇಳಿತ್ತು. ಆದರೆ, ಅವರು ಯಾರು ಅನುಮತಿ ಪಡೆದುಕೊಂಡಿಲ್ಲ. ಸರ್ಕಾರ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮೇ 9 ರಂದು ಮಠ ಮಂದಿರಗಳಲ್ಲಿ ಸುಪ್ರಭಾತ ಹಚ್ಚಿದಾಗ ಸರ್ಕಾರ ಎಚ್ಚೆತ್ತುಕೊಂಡಿತ್ತು. ಈಗ ಮತ್ತೆ ಸುಮ್ಮನಾಗಿದೆ. ತೇಪೆ ಹಚ್ಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ರಾಜ್ಯ ಸರ್ಕಾರವು ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ADVERTISEMENT

ಜೂನ್‌ 8 ರೊಳಗೆ ಅನಧಿಕೃತ ಧ್ವನಿವರ್ಧಕಗಳ ತೆರವಿಗೆ ರಾಜ್ಯ ಸರ್ಕಾರ ಮುಂದಾಗಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಹೋರಾಟ ಮತ್ತಷ್ಟು ತೀವ್ರವಾಗಲಿದೆ ಎಂದರು.

ಜಿಲ್ಲಾ ಘಟಕದ ಅಧ್ಯಕ್ಷ ಆನಂದ ಜಂಬಗಿಮಠ, ಉಪಾಧ್ಯಕ್ಷ ಗಣಪತಿ ಮನಗೂಳಿ, ಸಿದ್ದು ಬಾರದಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.