
ಪ್ರಜಾವಾಣಿ ವಾರ್ತೆ
ಮಹಾಲಿಂಗಪುರ: ಪಟ್ಟಣದ ಕೆಂಗೇರಿಮಡ್ಡಿಯ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವವು ಈಚೆಗೆ ಅಪಾರ ಭಕ್ತರ ಮಧ್ಯೆ ಸಂಭ್ರಮದಿಂದ ನೆರವೇರಿತು.
ಜಾತ್ರೆ ಅಂಗವಾಗಿ ಲಕ್ಷ್ಮೀದೇವಿ ಮೂರ್ತಿಗೆ ಅಭಿಷೇಕ, ವಿಶೇಷ ಅಲಂಕಾರ ಮಾಡಿ ಪೂಜಿಸಲಾಗಿತ್ತು. ಜಾತ್ರೆಗೆ ಆಗಮಿಸಿದ ಸಾವಿರಾರು ಮಹಿಳೆಯರಿಗೆ ಉಡಿ ತುಂಬಲಾಯಿತು. ಕೆಂಗೇರಿಮಡ್ಡಿಯ ಬಡಾವಣಿಯಲ್ಲಿ ಲಕ್ಷ್ಮೀದೇವಿಯ ಪಲ್ಲಕ್ಕಿ ಉತ್ಸವ ನಡೆಸಲಾಯಿತು. ಬೆಳಗಿನ ಜಾವ ನೂರಾರು ಭಕ್ತರು ದೀಡ್ ನಮಸ್ಕಾರ ಹಾಕಿದರು.
ಲಕ್ಷ್ಮೀದೇವಿಯ ಅರ್ಚಕಿ ಕಸ್ತೂರಿ ವಿಠ್ಠಲ ಪೂಜೇರಿ ಅವರು ಅಗ್ನಿಕುಂಡ ಹಾಯ್ದು ಭಕ್ತಿಯ ಪರಕಾಷ್ಠೆ ಮೆರೆದರು. ಜಾತ್ರೆಗೆ ಆಗಮಿಸಿದ ಸಾವಿರಾರು ಜನರು ದೇವಿಯ ದರ್ಶನ ಪಡೆದು ಮಹಾಪ್ರಸಾದ ಸವಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.