
ಪ್ರಜಾವಾಣಿ ವಾರ್ತೆ
ಮಹಾಲಿಂಗಪುರ: ಮಹಾಶಿವರಾತ್ರಿ ಅಂಗವಾಗಿ ಪಟ್ಟಣದ ಎಪಿಎಂಸಿ ರಸ್ತೆಯಲ್ಲಿನ ಹಿಂದೂ ರುದ್ರಭೂಮಿಯಲ್ಲಿ ಶಿವ ಬೃಂದಾವನ ರುದ್ರಭೂಮಿ ಅಭಿವೃದ್ಧಿ ಸಮಿತಿ ವತಿಯಿಂದ ಶಿವನ ಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಮಾದಿಗ ಸಮಾಜದ ರುದ್ರಭೂಮಿಯಲ್ಲಿ ಶರಣ ಮಾದರ ಚನ್ನಯ್ಯ ಸಮುದಾಯದ ವತಿಯಿಂದ ಶಿವನ ಮೂರ್ತಿ ಪ್ರತಿಷ್ಠಾಪಿಸಲಾಯಿತು. ಮಹಾಲಿಂಗೇಶ್ವರ ಮಠದ ಮಹಾಲಿಂಗೇಶ್ವರ ಸ್ವಾಮೀಜಿ ಪೂಜೆ ನೆರವೇರಿಸಿದರು.
ಸಮೀಪದ ಢವಳೇಶ್ವರದ ಹಿಂದೂ ರುದ್ರಭೂಮಿಯಲ್ಲಿ ಜಾಗರಣೆ, ಭಜನಾ ಕಾರ್ಯಕ್ರಮ ನಡೆಯಿತು. ಸೈದಾಪುರದ ಮುನ್ಯಾಳ ಕೆನಾಲ್ ಪಕ್ಕದ ಹಿಂದೂ ರುದ್ರಭೂಮಿಯಲ್ಲಿ ಶಿವಲಿಂಗಕ್ಕೆ ಅಭಿಷೇಕ, ಪೂಜೆ ನೆರವೇರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.