
ಮಹಾಲಿಂಗಪುರ: ಪಟ್ಟಣದ ಸರ್ಕಾರಿ ಪ್ರೌಢಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಂ. ಮುಲ್ಲಾ ಅವರು ಈಚೆಗೆ ಭೇಟಿ ನೀಡಿ, ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಪ್ರತಿಜ್ಞಾವಿಧಿ ಬೋಧಿಸಿದರು.
ಶಾಲೆಯ ಸಿಬ್ಬಂದಿಯೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಇಲಾಖೆಯ ಗುರಿಯಂತೆ ಯಾವ ಮಗುವೂ ಕಲಿಕೆಯಲ್ಲಿ ಹಿಂದುಳಿಯಬಾರದು. ನಮ್ಮ ಚಿತ್ತ ಶತಕದತ್ತ ಎಂಬ ಧ್ಯೇಯಯೊಂದಿಗೆ ಕರ್ತವ್ಯ ನಿರ್ವಹಿಸಬೇಕು. ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಕ್ರಿಯಾ ಯೋಜನೆ ರೂಪಿಸಿ, ಅನುಷ್ಠಾನಗೊಳಿಸಬೇಕು’ ಎಂದು ಸೂಚಿಸಿದರು.
ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ಜಾತಿ ವಸತಿ ನಿಲಯಕ್ಕೆ ಭೇಟಿ ನೀಡಿದ ಅವರು ವಿದ್ಯಾರ್ಥಿಗಳ ವಿದ್ಯಾಭ್ಯಾಸ ಪರಿಶೀಲಿಸಿದರು. ವಿದ್ಯಾರ್ಥಿಗಳ ಅಭ್ಯಾಸ ಮೇಲೆ ನಿಗಾ ವಹಿಸುವಂತೆ ನಿಲಯ ಪಾಲಕರಿಗೆ ಸೂಚಿಸಿದರು.
ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿದ ಅವರು, ‘ವಿದ್ಯಾರ್ಥಿಗಳಿಗೆ ಚೆನ್ನಾಗಿ ಅಭ್ಯಾಸ ನಡೆಸಿ, ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಪಾಲಕರು, ಮನೆಯಲ್ಲಿ ಕಲಿಕಾ ವಾತಾವರಣ ನಿರ್ಮಿಸಬೇಕು’ ಎಂದು ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.