ಕೃಷ್ಣಾ ತೀರದಲ್ಲಿರುವ ಗಾಂಧಿ ಯುಗದ ಕೊನೆಯ ಕೊಂಡಿ ಮೀರಾತಾಯಿ ಕೊಪ್ಪೀಕರ್. 7 ವರ್ಷ ಇದ್ದಾಗಲೇ ಮಹಾತ್ಮ ಗಾಂಧಿಯವರನ್ನು ನೋಡುವ ಸೌಭಾಗ್ಯ ಇವರದ್ದಾಯ್ತು. ಅಲ್ಲಿಂದ ಇಲ್ಲಿಯವರೆಗೂ ಗಾಂಧೀಜಿಯ ಅನುಯಾಯಿ ಆಗಿ ಅವರ ಸಂದೇಶ ಪಾಲನೆಯಲ್ಲೇ ಜೀವನ ನಡೆಸುತ್ತಾ ಬಂದಿರುವ ಇವರು ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ವಾತ್ಸಲ್ಯ ಧಾಮವನ್ನು ಕಟ್ಟಿಕೊಂಡಿದ್ದಾರೆ. ಆಚಾರ್ಯ ವಿನೋಬಾ ಭಾವೆ ಅವರಿಂದ ಪ್ರಭಾವಿತರಾಗಿರುವ ಮೀರಾತಾಯಿ ಅವರು ಹೇಳಿಕೊಟ್ಟ ಸರಳ ಜೀವನ, ಶ್ರಮದಾನ, ಹೈನುಗಾರಿಕೆ ಹಾಗೂ ಸಾವಯವ ಕೃಷಿಯನ್ನೇ ಬದುಕಿಗೆ ನೆಚ್ಚಿಕೊಂಡಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.