
ಬಾಗಲಕೋಟೆ: ನಗರದ ವಿವಿಧೆಡೆ ಶಾಲಾ–ಕಾಲೇಜುಗಳಲ್ಲಿ ಮಕರ ಸಂಕ್ರಾಂತಿಯನ್ನು ಆಚರಿಸಲಾಯಿತು.
ಬಿವಿವಿಎಸ್ ಆಯುರ್ವೇದ ಕಾಲೇಜು: ಕಾಲೇಜಿನಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಮಕರ ಸಂಕ್ರಾಂತಿ ಅಂಗವಾಗಿ ಪೂಜೆ ಮಾಡಿದರು. ಧ್ವನಂತರಿಗೂ ಪೂಜೆ ಸಲ್ಲಿಸಲಾಯಿತು.
ರಂಗೋಲಿ, ಗಾಳಿಪಟ ಹಾಗೂ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕಾಲೇಜಿನ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಸಜ್ಜನ, ಪ್ರಾಚಾರ್ಯ ಮಲ್ಲಿಕಾರ್ಜುನ ಹಿರೇಮಠ ಉಪಸ್ಥಿತರಿದ್ದರು.
ಎಚ್ಎಸ್‌ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ‘ಸಂಕ್ರಾಂತಿ ನಾಡಿನ ಸಾಂಸ್ಕೃತಿಕ ಹಬ್ಬವಾಗಿದೆ. ಆಧುನಿಕ ಬದುಕಿನ ಈ ಕಾಲಘಟ್ಟದಲ್ಲಿ ದೇಸಿ ಸಂಸ್ಕೃತಿಯನ್ನು ಬಿಂಬಿಸುವ ಹಬ್ಬಗಳನ್ನು ಆಚರಿಸುವುದು ಅಗತ್ಯವಾಗಿದೆ ಎಂದು ಎಸ್.ಎನ್.ಮೆಡಿಕಲ್ ಕಾಲೇಜಿನ ಪ್ರಾಚಾರ್ಯರಾದ ಡಾ.ಭುವನೇಶ್ವರಿ ಯಳಮಲಿ ಹೇಳಿದರು.
ಆಸ್ಪತ್ರೆಯ ಪ್ರೊಜೆಕ್ಟ್ ಮ್ಯಾನೇಜರ್ ರಾಜೇಂದ್ರ ಹಿರೇಮಠ, ಸತ್ಯನಾರಾಯಣ ರೆಡ್ಡಿ, ಮಧುಮತಿ, ಶ್ರೇಯಾ, ನಿತೀಶ ಉಳ್ಳಾಗಡ್ಡಿ ಉಪಪ್ರಾಚಾರ್ಯ ಡಾ.ಸಿ.ಎಸ್.ಹಿರೇಮಠ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀರಾಮ ಕೋರಾ ಮತ್ತಿತರರು ಭಾಗವಹಿಸಿದ್ದರು.
ವಾಗ್ದೇವಿ ಇಂಗ್ಲಿಷ್ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ: ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಶಾಲೆಯಲ್ಲಿ ಸಡಗರದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳೇ ಗಾಳಿಪಟ ಸಿದ್ಧಪಡಿಸಿ ಹಾರಿಸಿ ಸಂಭ್ರಮಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.