ರಬಕವಿ ಬನಹಟ್ಟಿ: ಹಿಂದುಳಿದ ವರ್ಗಗಳ ಜನರು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸೂಕ್ತ ಮಾಹಿತಿ ಪಡೆದುಕೊಂಡು ಅವುಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮ ಮಂಡಳಿ ಅಧ್ಯಕ್ಷ ಕೀರ್ತಿ ಗಣೇಶ ತಿಳಿಸಿದರು.
ಅಬುಧವಾರ ಸಮೀಪದ ರಾಂಪುರದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ನಡೆದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಲ್ಲಿರುವ ಯೋಜನೆಗಳ ಮಾಹಿತಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ದೊರೆಯಬೇಕು. ಸ್ವಾರ್ಥ ಮರೆತು ನಿಸ್ವಾರ್ಥದಿಂದ ಬಡವರಿಗೆ, ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗ ಸೌಲಭ್ಯಗಳು ದೊರೆಯವಂತೆ ಗಮನ ನೀಡಬೇಕು ಎಂದು ತಿಳಿಸಿದರು.
ಅಭಿವೃದ್ಧಿ ನಿಗಮದ ಬಾಗಲಕೋಟೆ ಜಿಲ್ಲೆಯ ಅಧಿಕಾರಿ ಮಲ್ಲೇಶ ಬಿರಾದಾರ ಮಾತನಾಡಿ, ನಿಗಮದಲ್ಲಿ ದೇವರಾಜ ಅರಸು ಸ್ವಯಃ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ, ಅರಿವು ಶಿಕ್ಷಣ ಸಾಲ, ಸ್ವಯಃ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿದೆ), ವಿದೇಶ ವಿಶ್ವ ವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಸಾಲ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ, ಹಾಗೂ ಹೊಲಿಗೆ ಯಂತ್ರ ವಿತರಣೆ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮೂಲಕ ಆನಲೈನ್ ನಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ಅಧ್ಯಕ್ಷ ಶಿವಲಿಂಗ ಟಿರಕಿ ಮಾತನಾಡಿ, ಸರ್ಕಾರದ ಬಹಳಷ್ಟು ಯೋಜನೆಗಳು ಹಿಂದುಳಿದ ವರ್ಗದ ಜನರಿಗೆ ದೊರೆತಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿರುವ 195 ಹಿಂದುಳಿದ ಒಳ ಪಂಗಡಗಳಿಗೆ ಸರ್ಕಾರದ ಸೌಲಭ್ಯಗಳು ದೊರೆಯುವಂತೆ ನಿಗಮದ ಅಧ್ಯಕ್ಷರು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ಹಳೇ ಹುಬ್ಬಳ್ಳಿಯ ವೀರಭಿಕ್ಷಾವರ್ತಿ ಮಠದ ಶಿವಶಂಕರ ಶಿವಾಚಾರ್ಯರು, ಬನಹಟ್ಟಿಯ ಹಿರೇಮಠದ ಶರಣಬಸವ ಶಿವಾಚಾರ್ಯರು, ರಬಕವಿಯ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಸಂಗಪ್ಪ ಬಿಳ್ಳೂರು, ಬಸವಪ್ರಭು ಹಟ್ಟಿ, ಶಿವಾನಂದ ಮಹಾಬಳಶೆಟ್ಟಿ, ಮಲ್ಲಿಕಾರ್ಜುನ ತುಂಗಳ, ಬಸವರಾಜ ಕೊಕಟನೂರ, ರಾಜೇಂದ್ರ ಮಿರ್ಜಿ, ಸಂಗಪ್ಪ ಉದಗಟ್ಟಿ, ಸಂತೋಷ ಮಾಚಕನೂರ, ಕಾಡು ಕೊಕಟನೂರ, ಸದಾಶಿವ ಬರಗಿ, ಗಂಗಪ್ಪ ಒಂಟಗುಡಿ, ಓಂಪ್ರಕಾಶ ಬಾಗೇವಾಡಿ, ರಾಮಣ್ಣ ಕುಲಗೋಡ, ರವಿ ಬಾಡಗಿ, ವಿವೇಕಾನಂದ ಹುಲ್ಯಾಳ ಸೇರಿದಂತೆ ಅನೇಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.