ADVERTISEMENT

ಬೇವೂರು: ಸಾಮೂಹಿಕ ವಿವಾಹ 26ರಂದು

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2025, 15:06 IST
Last Updated 23 ಏಪ್ರಿಲ್ 2025, 15:06 IST

ರಾಂಪುರ: ಆಲ್ ಇಂಡಿಯಾ ದಲಿತ ಯೂಥ್ ಆರ್ಗನೈಜೇಶನ್ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷ ಗ್ಯಾನಪ್ಪ ಚಲವಾದಿ ಏ.26ರಂದು ನೇಮಕ ಮಾಡಿರುವ ತಮ್ಮ ಪುತ್ರಿಯ ಮದುವೆ ಸಮಾರಂಭದಲ್ಲಿ ಅನೇಕ ಜೋಡಿಗಳ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ ಸಹ ಆಯೋಜಿಸಿದ್ದಾರೆ.

ಶನಿವಾರ ಬೆಳಿಗ್ಗೆ 11 ಗಂಟೆಗೆ ಸಮೀಪದ ಬೇವೂರಿನ ಆದರ್ಶ ಸಂಯುಕ್ತ ಪಿಯು ಕಾಲೇಜಿನ ಆವರಣದಲ್ಲಿ ಮದುವೆ ಸಮಾರಂಭ ನಡೆಯಲಿದ್ದು, ಕೊಪ್ಪಳ ಗವಿಮಠದ ಶ್ರೀಗಳು, ಇಳಕಲ್ಲಿನ ಗುರುಮಹಾಂತ ಶ್ರೀಗಳು, ಕಮತಗಿಯ ಹೊಳೆ ಹುಚ್ಚೇಶ್ವರ ಶ್ರೀಗಳು, ಬಿಲ್ ಕೆರೂರಿನ ಸಿದ್ಧಲಿಂಗ ಶಿವಾಚಾರ್ಯರು, ಬೇವೂರಿನ ಗ್ಯಾನಪ್ಪಜ್ಜನವರು ಹಾಗೂ ಆಯುಷ್ಮಾನ ದಮ್ಮಪಾಲ ಬಂತೇಜಿ ಸಾನಿಧ್ಯ ವಹಿಸುವರು.

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದು, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಮತ್ತು ಸಾಮಾಜಿಕ ಹೋರಾಟಗಾರ ಚೇತನ ಅಹಿಂಸಾ ಕಾರ್ಯಕ್ರಮ ಉದ್ಘಾಟಿಸುವರು. ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ, ಶಾಸಕ ಎಚ್.ವೈ.ಮೇಟಿ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಜಿಲ್ಲಾ ಎಸ್ಪಿ ಅಮರನಾಥ ರೆಡ್ಡಿ, ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ ಸೇರಿ ರಾಜಕೀಯ ಮುಖಂಡರು, ಗಣ್ಯರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಗ್ಯಾನಪ್ಪ ಚಲವಾದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.