ADVERTISEMENT

ಮುರುಡಿ: ಡಿ.20ರಂದು ಮೂರ್ತಿ ಪ್ರತಿಷ್ಠಾಪನೆ, ಸಾಮೂಹಿಕ ವಿವಾಹ 

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2023, 14:33 IST
Last Updated 17 ಡಿಸೆಂಬರ್ 2023, 14:33 IST
ನೂತನವಾಗಿ ನಿರ್ಮಿಸಿದ ಶ್ರೀ ಪಾಂಡುರಂಗ ವಿಠ್ಠಲ ರುಕ್ಮೀಣಿ ದೇವಸ್ಥಾನ
ನೂತನವಾಗಿ ನಿರ್ಮಿಸಿದ ಶ್ರೀ ಪಾಂಡುರಂಗ ವಿಠ್ಠಲ ರುಕ್ಮೀಣಿ ದೇವಸ್ಥಾನ   

ಗುಳೇದಗುಡ್ಡ: ತಾಲ್ಲೂಕಿನ ಮುರುಡಿ ಗ್ರಾಮದಲ್ಲಿ ಮೂರು ದಿನಗಳವರೆಗೆ ದೇವರ ಮೂರ್ತಿ ಪ್ರತಿಷ್ಠಾಪನೆ ನಿಮಿತ್ತ ಮೆರವಣಿಗೆ, ಮೂರ್ತಿ ಪ್ರತಿಷ್ಠಾಪನೆ ಹಾಗೂ ಸರ್ವ ಧರ್ಮಗಳ ಸಾಮೂಹಿಕ ವಿವಾಹ ಜರುಗಲಿದೆ.

ಡಿ.20 ರಂದು ಬೆಳಿಗ್ಗೆ 8 ಗಂಟೆಗೆ ಗುಳೇದಗುಡ್ಡದಿಂದ ಮುರುಡಿ ಗ್ರಾಮದವರೆಗೆ ಶ್ರೀ ಪಾಂಡುರಂಗ ವಿಠ್ಠಲ ರುಕ್ಮೀಣಿ ದೇವರ ಮೂರ್ತಿ ಮೆರವಣಿಗೆ ಜರುಗುವುದು. 21 ರಂದು ಬೆಳಿಗ್ಗೆ 8 ಗಂಟೆಗೆ ಮೂರ್ತಿ ಪ್ರತಿಷ್ಠಾಪನೆ ಜರುಗುವುದು. 22 ರಂದು ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ಸರ್ವ ಧರ್ಮಗಳ ಸಾಮೂಹಿಕ ವಿವಾಹ ಜರುಗುವುದು.

ಪಂಢರಾಪುರದ ಶಿವುರಕರ ಮಹಾರಾಜರು, ಕೋಲಾರದ ಕಲ್ಲಿನಾಥ ಶ್ರೀಗಳು, ಬಬಲಾದಿ ಮಠದ ಸಿದ್ದರಾಮಯ್ಯ ಅಜ್ಜಾರು, ಧರ್ಮಸ್ಥಳದ ಶ್ರೀ ಮಂಜುನಾಥ ದೇವಸ್ಥಾನದ ಧರ್ಮಾಧಿಕಾರಿ ವಿರೇಂದ್ರ ಹೆಗಡೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರು.

ADVERTISEMENT

ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಸಾರಿಗೆ ಸಚಿವ ಶ್ರೀರಾಮುಲು ಪಾರಿವಾಳ ಹಾರಿ ಬಿಡುವರು. ಲೋಕಸಭಾ ಸಂಸದ ಪಿ.ಸಿ.ಗದ್ದಿಗೌಡರ ಜ್ಯೋತಿ ಬೆಳಗಿಸುವರು. ಹಾನಾಪೂರ ಎಸ್.ಪಿ. ಗ್ರಾಪಂ ಅಧ್ಯಕ್ಷ ಜಗದೀಶ ಹಿರೇಗೌಡ್ರ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಗೌರವಾಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ವಿವಿಧ ಮುಖಂಡರು ಪಾಲ್ಗೊಳ್ಳುವರು ಎಂದು ಸಂಘಟಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.