ADVERTISEMENT

ಬಾಗಲಕೋಟೆ | ಯುವನಿಧಿ ನೋಂದಣಿ ಅಭಿಯಾನ

​ಪ್ರಜಾವಾಣಿ ವಾರ್ತೆ
Published 18 ಜುಲೈ 2025, 2:42 IST
Last Updated 18 ಜುಲೈ 2025, 2:42 IST
ಯುವನಿಧಿ
ಯುವನಿಧಿ   

ಬಾಗಲಕೋಟೆ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 7ರವರೆಗೆ ಜಿಲ್ಲೆಯ ಪದವಿ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಯುವನಿಧಿ ವಿಶೇಷ ನೋಂದಣಿ ಅಭಿಮಾನ ಹಮ್ಮಿಕೊಳ್ಳಲಾಗಿದೆ.

2025ನೇ ಸಾಲಿನಲ್ಲಿ ತೇರ್ಗಡೆ ಹೊಂದಿರುವ ಪದವಿ, ತಾಂತ್ರಿಕ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಪದವೀಧರರ ಯುವನಿಧಿ ಅರ್ಜಿಯನ್ನು ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 135ರಲ್ಲಿರುವ  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉಚಿತವಾಗಿ ಅರ್ಜಿ ಹಾಕಲಾಗುವುದು.

ದಾಖಲಾತಿಗಳೊಂದಿಗೆ ಕಚೇರಿಗೆ ಭೇಟಿ ನೀಡಬಹುದು. ಮಾಹಿತಿಗೆ ದೂ: 08354-235337, 76766 92029,70196 06100 ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.