ರಬಕವಿ ಬನಹಟ್ಟಿ: ‘ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯದಷ್ಟೆ ಮಾನಸಿಕ ಆರೋಗ್ಯವೂ ಮುಖ್ಯ. ಉತ್ತಮ ಮಾನಸಿಕ ಆರೋಗ್ಯ ಹೊಂದಿದರೆ ದಕ್ಷ ಕಾರ್ಯ ನಿರ್ವಹಣೆ ಸಾಧ್ಯ’ ಎಂದು ಬನಹಟ್ಟಿಯ ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ಆಶಪ್ಪ ಸಣಮನಿ ತಿಳಿಸಿದರು.
ಇಲ್ಲಿನ ಪೂರ್ಣಪ್ರಜ್ಞೆ ಶಿಕ್ಷಣ ಸಂಸ್ಥೆಯ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಮಂಗಳವಾರ ಹಮ್ಮಿಕೊಂಡ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಮಾನಸಿಕ ಆರೋಗ್ಯವು ಆರೋಗ್ಯಕರ ಸಮುದಾಯವನ್ನು ಮತ್ತು ಆರೋಗ್ಯಕರ ರಾಷ್ಟ್ರವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಮಾನಸಿಕ ಅಥವಾ ಬೇರೆ ಯಾವುದೇ ನ್ಯೂನತೆ ಹೊಂದಿದವರು ಉಚಿತ ಕಾನೂನು ನೆರವನ್ನು ಪಡೆದುಕೊಳ್ಳಬಹುದಾಗಿದೆ’ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶೆ ಸುಷ್ಮಾ ಟಿ.ಸಿ, ರಬಕವಿ ಬನಹಟ್ಟಿ ಸಮುದಾಯ ಕೇಂದ್ರದ ಡಾ.ಆಯೇಷಾ ತಾಂಬೋಳಿ,ಎಂ.ಕೆ. ಮುಲ್ಲಾ, ವಕೀಲ ಕೆ.ಡಿ.ತುಬಚಿ ಮಾತನಾಡಿದರು.
ಸಹಾಯಕ ಸರ್ಕಾರಿ ಅಭಿಯೋಜಕಿ, ಭವ್ಯ ಆರ್, ಸಂಸ್ಥೆಯ ಕಾರ್ಯಾಧ್ಯಕ್ಷ ಸಿದ್ದಪ್ಪ ಮೇಣಿ, ಉಪಾಧ್ಯಕ್ಷ ರಾಮದಾಸ ಸಿಂಗನ, ಶಿಕ್ಷಣ ಸಂಯೋಜಕ ಬಿ.ಎಂ. ಹಳೆಮನಿ, ಪಿ.ಜಿ. ಪಾಟೀಲ, ಎನ್.ಆರ್.ಬರಗಿ, ಬಸವರಾಜ ಕುಂಬಾರ, ಪ್ರಾಚಾರ್ಯ ಅದೃಶ್ಯಯ್ಯ ಕಾಡದೇವರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.